ಪಿಣರಾಯಿ ವಿಜಯನ್ ವಿರುದ್ಧ ಇಡಿ ರಾಜಕೀಯ ಸಂಚು: ಸಿಪಿಐಎಂ ಗಂಭೀರ ಆರೋಪ

Date:

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಿಪಿಐಎಂ ನಾಯಕ ಪಿಣರಾಯಿ ವಿಜಯನ್, ಅವರ ಮಗಳು ವೀಣಾ ಟಿ. ಮತ್ತು ಅಳಿಯ ಪಿ. ಎ. ಮುಹಮ್ಮದ್ ರಿಯಾಸ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಪ್ರಕರಣಗಳನ್ನು ದಾಖಲಿಸಿ ರಾಜಕೀಯವಾಗಿ ಗುರಿಮಾಡುತ್ತಿದೆ ಎಂದು ಸಿಪಿಐಎಂ ಪಕ್ಷವು ಆರೋಪಿಸಿದೆ.

- Advertisement -

ಇತ್ತೀಚೆಗೆ ಕೊಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್‌) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳಹಣ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ನಡೆಸುತ್ತಿರುವ ಇಡಿ, ಕೇರಳ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದು ಪಿಣರಾಯಿ ವಿಜಯನ್ ಹಾಗೂ ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲು ಶಿಫಾರಸು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ಪಿಣರಾಯಿ ವಿಜಯನ್ ಮಗಳಿಗೆ ಇಡಿ ಸಂಕಷ್ಟ: ವೀಣಾ ಕೈಬರಹದ ಟಿಪ್ಪಣಿ ವಶಕ್ಕೆ

ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಕೇಂದ್ರ ತನಿಖಾ ಸಂಸ್ಥೆಗಳಾದ ಇಡಿ, ದೇಶಾದ್ಯಂತ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿವೆ. ಪಿಣರಾಯಿ ವಿಜಯನ್ ಹಾಗೂ ಸಿಪಿಐಎಂ ಪಕ್ಷವನ್ನು ಕುಗ್ಗಿಸಲು ಇಡಿ ದೀರ್ಘಕಾಲದಿಂದ ಪ್ರಯತ್ನಿಸುತ್ತಿದೆ. ಈ ರಾಜಕೀಯ ಸಂಚನ್ನು ಪಕ್ಷವು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಪ್ರಬಲವಾಗಿ ಎದುರಿಸಲಿದೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರು ಸಹ ಪ್ರತಿಕ್ರಿಯಿಸಿ, “ಸಿಪಿಐಎಂ ಮತ್ತು ರಾಜ್ಯದ ಸಹಕಾರ ವಲಯಕ್ಕೆ ಮಸಿ ಬಳೆಯಲು ಇಡಿ ಸುಳ್ಳು ಆರೋಪಗಳನ್ನು ಸೃಷ್ಟಿಸುತ್ತಿದೆ. ಪ್ರಕರಣದಲ್ಲಿರುವ ಆರೋಪಿಗಳನ್ನು ಹೆದರಿಸಿ, ಅವರಿಗೆ ಬೆಂಬಲ ನೀಡುವ ಭರವಸೆ ನೀಡಿ ತನಗೆ ಬೇಕಾದ ಹೇಳಿಕೆಗಳನ್ನು ಇಡಿ ಪಡೆಯುತ್ತಿದೆ” ಎಂದು ಕಿಡಿಕಾರಿದ್ದಾರೆ.

ಸಿಎಂಆರ್‌ಎಲ್ ಸಂಸ್ಥೆಯು ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಅವರ ಸಾಫ್ಟ್‌ವೇರ್ ಕಂಪನಿ ‘ಎಕ್ಸಾಲಾಜಿಕ್ ಸೊಲ್ಯೂಷನ್ಸ್’ಗೆ ಐಟಿ ಸೇವೆಯ ಹೆಸರಿನಲ್ಲಿ ಅಕ್ರಮವಾಗಿ ₹2.78 ಕೋಟಿ ಹಣ ವರ್ಗಾಯಿಸಿದೆ ಎಂಬುದು ಇಡಿಯ ಆರೋಪವಾಗಿದೆ. ಆದರೆ, ಈ ಎಲ್ಲ ಆರೋಪಗಳನ್ನು ವೀಣಾ ಮತ್ತು ಅವರ ಪತಿ ಮುಹಮ್ಮದ್ ರಿಯಾಸ್ ಸಾರಾಸಾಗಟಾಗಿ ತಳ್ಳಿಹಾಕಿದ್ದು, ಇವೆಲ್ಲವೂ ತಪ್ಪು ಮಾಹಿತಿಯಿಂದ ಕೂಡಿದ ಆರೋಪಗಳು ಎಂದು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಇಡಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸಿಪಿಐಎಂ ಆರೋಪಿಸಿದ್ದರೆ, ಕಾನೂನು ತನ್ನ ಹಾದಿಯಲ್ಲಿ ಸಾಗಲಿದೆ ಎಂದು ವಿರೋಧ ಪಕ್ಷಗಳು ಹೇಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...