ಕೋಲ್ಕತ್ತಾದ IPAC ಕಚೇರಿ, ಟಿಎಂಸಿ ಐಟಿ ಮುಖ್ಯಸ್ಥರ ನಿವಾಸದ ಮೇಲೆ ಇ.ಡಿ ದಾಳಿ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ IPAC ಕಚೇರಿ ಮತ್ತು ಟಿಎಂಸಿ ಐಟಿ ವಿಭಾಗದ ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸ ಸೇರಿದಂತೆ ಹಲವೆಡೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ.

- Advertisement -

ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರು 2014 ರ ಲೋಕಸಭೆ ಚುನಾವಣೆಗೆ ಮುನ್ನ IPAC ಸಂಸ್ಥೆಯನ್ನು ಸ್ಥಾಪಿಸಿದ್ದರು. 2019 ರ ನಂತರ ಈ ಸಂಸ್ಥೆಯು ತೃಣಮೂಲ ಕಾಂಗ್ರೆಸ್ ಜೊತೆ ಅತ್ಯಂತ ನಿಕಟವಾಗಿ ಕೆಲಸ ಮಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಸಾಲ್ಟ್ ಲೇಕ್‌ನ ‘ಗೋದ್ರೇಜ್ ವಾಟರ್‌ಸೈಡ್’ ಕಟ್ಟಡದಲ್ಲಿರುವ IPAC ಕಚೇರಿಯಲ್ಲಿ ಶೋಧ ಕಾರ್ಯ ಆರಂಭಿಸಿದರು. ಪ್ರತೀಕ್ ಜೈನ್ ಅವರು ಮಮತಾ ಬ್ಯಾನರ್ಜಿ ಅವರ ಚುನಾವಣಾ ಕಾರ್ಯತಂತ್ರದ ಪ್ರಮುಖ ಸದಸ್ಯರು ಹೌದು. ಇದು ಕೇಂದ್ರ ಸರ್ಕಾರದ ರಾಜಕೀಯ ದ್ವೇಷದ ಕ್ರಮ. ಕೇಂದ್ರದ ಏಜೆನ್ಸಿಗಳು ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮತ್ತು ರಹಸ್ಯ ತಂತ್ರಗಾರಿಕೆಯ ದಾಖಲೆ ಕಳ್ಳತನ ಮಾಡಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ʻIPAC ಕಚೇರಿ ಬಳಿ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು ಅಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಬಂಗಾಳ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಸರ್ಕಾರ ತನ್ನ ರಾಜಕೀಯ ಕುತಂತ್ರ ಬುದ್ಧಿ ಶುರು ಮಾಡಿಕೊಂಡಿದೆ. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ, ಪಕ್ಷದ ಕಾರ್ಯತಂತ್ರದ ಬಗ್ಗೆ ಹಾಗೂ ಪಕ್ಷದ ಗೌಪ್ಯ ದಾಖಲೆಗಳಿಗಾಗಿ ದಾಳಿ ಮಾಡಲಾಗಿದೆ. ಜಾರಿ ನಿರ್ದೇಶನಲಾಯದ ಅಧಿಕಾರಿಗಳ ಈ ತಂತ್ರ ಅತ್ಯಂತ ದುರದೃಷ್ಟಕರ. ದೇಶವನ್ನು ಸುರಕ್ಷಿತವಾಗಿಡಲು ಸಾಧ್ಯವಾಗದ ಗೃಹ ಸಚಿವರು ಈ ಸಂಚಿನ ಹಿಂದೆ ಇದ್ದಾರೆ. ಅಮಿತ್ ಶಾಗೆ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬೇಕಾಗಿದೆʼ ಎಂದು ಗುಡುಗಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಾಲುಗಲ್ಲದ ಹುಡುಗ ವೈಭವ್ ಮತ್ತು ಕ್ರಿಕೆಟ್ ಕಲಾತ್ಮಕತೆ

ರಾಜಕೀಯ ತಂತ್ರಗಾರಿಕೆ ಮತ್ತು ಅಭ್ಯರ್ಥಿಗಳ ಪಟ್ಟಿ ಸಂಗ್ರಹ ಮಾಡಿಕೊಳ್ಳೋದು ಜಾರಿ ನಿರ್ದೇಶನಾಲಯ ಅಥವಾ ಗೃಹ ಸಚಿವರ ಕೆಲಸವಾ? ನಾನು ಬಿಜೆಪಿಯ ದಾಖಲೆಗಳನ್ನು ಪಡೆದರೆ ಅದರ ಪರಿಣಾಮ ಏನಾಗಬಹುದು ಯೋಚಿಸಿ, ಯಾವುದೇ ರಕ್ಷಣೆ ಇಲ್ಲದೆ ತನ್ನ ಪಕ್ಷದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರ ಏಜೆನ್ಸಿಗಳ ಕೆಲಸಕ್ಕೆ ಅಡ್ಡಿಪಡಿಸುವ ಇತಿಹಾಸ ಮಮತಾ ಅವರಿಗಿದೆ. ಇ.ಡಿ ತನ್ನ ಕೆಲಸ ಮಾಡುತ್ತಿದೆ. ತನಿಖೆಗೆ ಅಡ್ಡಿಪಡಿಸಿದ ಕಾರಣಕ್ಕಾಗಿ ಇ.ಡಿ ಮುಖ್ಯಮಂತ್ರಿಗಳ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಸುವೇಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...