ಪಂಜಾಬ್ ಸಚಿವ ಸಂಜೀವ್ ಅರೋರಾ ನಿವಾಸದ ಮೇಲೆ ಮತ್ತೆ ಇಡಿ ದಾಳಿ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಕೈಗಾರಿಕಾ ಸಚಿವ ಸಂಜೀವ್ ಅರೋರಾ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಇತರ ಕೆಲವರ ನಿವಾಸ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ದಾಳಿ ನಡೆಸಿದೆ.

- Advertisement -

ಚಂಡೀಗಢದಲ್ಲಿರುವ ಅರೋರಾ ಅವರ ಅಧಿಕೃತ ನಿವಾಸ ಮತ್ತು ಗುರುಗ್ರಾಮದಲ್ಲಿರುವ (ಹರಿಯಾಣ) ರಿಯಲ್ ಎಸ್ಟೇಟ್ ಕಂಪನಿ ಸೇರಿದಂತೆ ಐದು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ವಿಭಾಗಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಅಕ್ರಮ ಹಣ ವರ್ಗಾವಣೆ | ತಮಿಳುನಾಡು ಸಚಿವ ಐ ಪೆರಿಯಸಾಮಿ ಮೇಲೆ ಇಡಿ ದಾಳಿ

ಏಪ್ರಿಲ್‌ನಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ನಾಗರಿಕ ನಿಬಂಧನೆಗಳ ಅಡಿಯಲ್ಲಿ ಇಡಿ ಅರೋರಾ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಅರೋರಾ ತನಿಖಾ ಸಂಸ್ಥೆಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಮತ್ತು ಸತ್ಯ ಮೇಲುಗೈ ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದರು.

ವಸತಿ ಯೋಜನೆಗಳಿಗಾಗಿ ಕೈಗಾರಿಕಾ ಭೂಮಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಹಣ ವರ್ಗಾವಣೆ ಪ್ರಕರಣದಲ್ಲಿ 2024ರಲ್ಲಿಯೂ ಇಡಿ ಲುಧಿಯಾನ ಪಶ್ಚಿಮದ ಶಾಸಕರ ಮೇಲೆ ದಾಳಿ ನಡೆಸಿತ್ತು. ಆಗ ಅರೋರಾ ಆಗ ರಾಜ್ಯಸಭಾ ಸಂಸದರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...