ನ್ಯೂಸ್‌ಕ್ಲಿಕ್, ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥಗೆ 184 ಕೋಟಿ ರೂ. ಇ.ಡಿ ದಂಡ

Date:

ಜಾರಿ ನಿರ್ದೇಶನಾಲಯವು(ಇ.ಡಿ) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆಯಡಿ ನ್ಯೂಸ್ ಪೋರ್ಟಲ್ ನ್ಯೂಸ್ ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ 184 ಕೋಟಿ ರೂ. ದಂಡ ವಿಧಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

- Advertisement -

ಫೆಮಾ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್ ಪೋರ್ಟಲ್ ಹೊಂದಿರುವ – ಪಿಪಿಕೆ ನ್ಯೂಸ್ ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 120 ಕೋಟಿ ಹಾಗೂ ಪುರ್ಕಾಯಸ್ಥ ಅವರಿಗೆ 64 ಕೋಟಿ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಎಫ್‌ಇಎಂಎ)ಯ ನಿಬಂಧನೆಗಳನ್ನು “ಉಲ್ಲಂಘಿಸುತ್ತಿರುವುದು” ಮೂಲಭೂತವಾಗಿ ಎರಡು ಆರೋಪಗಳಲ್ಲಿ ಕಂಡುಬಂದಿದೆ. ಸೇವೆಗಳು ಮತ್ತು ರಫ್ತುಗಳ ತಪ್ಪು ಘೋಷಣೆಯ ಜೊತೆಗೆ ಎಫ್‌ಡಿಐ ನಿಧಿಗಳ ತಪ್ಪು ನಿರೂಪಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಮೊದಲು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ 2021ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ಸೈದುಲಜಬ್ ಪ್ರದೇಶದಲ್ಲಿರುವ ನ್ಯೂಸ್‌ಕ್ಲಿಕ್ ಕಚೇರಿ ಮೇಲೆ ಇ.ಡಿ ದಾಳಿ ಮಾಡಿತ್ತು.

ಫೆಮಾ ನಿಬಂಧನೆಗಳನ್ನು ಉಲ್ಲಂಘಿಸಿ ನಾಲ್ಕು ವಿದೇಶಿ ಸಂಸ್ಥೆಗಳ ಮೂಲಕ 28.46 ಕೋಟಿ ರೂಪಾಯಿ (ಅಂದಾಜು) ವಿವರಿಸಲಾಗದ ರಫ್ತು ಹಣ ಸ್ವೀಕರಿಸಿದೆ ಎಂದು ಆರೋಪಿಸಲಾಗಿದೆ. ಈ ನಿಧಿಯನ್ನು ಎಫ್‌ಡಿಐ ಎಂದು ತಪ್ಪಾಗಿ ನಿರೂಪಿಸುವ ಮೂಲಕ 9.59 ಕೋಟಿ ರೂಪಾಯಿಗಳ (ಅಂದಾಜು) ವಿದೇಶಿ ನಿಧಿಯ ವಿವರಿಸಲಾಗದ ರಸೀದಿ ಇದೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....