ನಟ ರಾಣಾ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ ನಾಲ್ವರಿಗೆ ಇಡಿ ಸಮನ್ಸ್

Date:

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ನಟಿ ಲಕ್ಷ್ಮಿ ಮಂಚು ಅವರಿಗೆ ಸಮನ್ಸ್ ಜಾರಿ ಮಾಡಿದೆ.

- Advertisement -

ಜುಲೈ 23ರಂದು ವಿಚಾರಣೆಗೆ ಹಾಜರಾಗುವಂತೆ ನಟ ದಗ್ಗುಬಾಟಿ ಅವರಿಗೆ ತಿಳಿಸಲಾಗಿದೆ. ಜುಲೈ 30ರಂದು ಪ್ರಕಾಶ್ ರಾಜ್, ಆಗಸ್ಟ್ 6ರಂದು ದೇವರಕೊಂಡ ಮತ್ತು ಆಗಸ್ಟ್ 13ರಂದು ಮಂಚು ಅವರನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? 100 ಕೋಟಿ ರೂ. ಪೋಂಜಿ ಹಗರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

ಈ ಹಿಂದೆ ಸೈಬರಾಬಾದ್ ಪೊಲೀಸರು ಹೈದರಾಬಾದ್‌ನಲ್ಲಿ ದಾಖಲಿಸಿದ ಎಫ್‌ಐಆರ್ ಆಧರಿಸಿ, ತನಿಖಾ ಸಂಸ್ಥೆಯು ಈ ಪ್ರಕರಣದಲ್ಲಿ 29 ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇವರಕೊಂಡ, ದಗ್ಗುಬಾಟಿ, ಮಂಚು, ರಾಜ್, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ ಮತ್ತು ಟಿವಿ ನಿರೂಪಕಿ ಶ್ರೀಮುಖಿ ಹೆಸರು ಕಾಣಿಸಿಕೊಂಡಿದೆ.

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 49, ತೆಲಂಗಾಣ ರಾಜ್ಯ ಗೇಮಿಂಗ್ ಕಾಯ್ದೆ (ಟಿಎಸ್‌ಜಿಎ) ಸೆಕ್ಷನ್ 4 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66-ಡಿ ಜೊತೆಗೆ ಹಲವು ಸೆಕ್ಷನ್‌ಗಳ ಅಡಿ ನಟರು ಮತ್ತು ಮಾಧ್ಯಮ ಪ್ರಭಾವಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ನಟರು ಮತ್ತು ಪ್ರಭಾವಿಗಳು ಆನ್‌ಲೈನ್ ಪಾಪ್-ಅಪ್ ಜಾಹೀರಾತುಗಳ ಮೂಲಕ ಈ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಪ್ರಚಾರ ಮಾಡಿದ್ದಾರೆ. ಇದು ಬಳಕೆದಾರರನ್ನು ಅಕ್ರಮ ಜೂಜಾಟದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಸ್ಪಷ್ಟಣೆ ನೀಡಿರುವ ಪ್ರಕಾಶ್ ರಾಜ್, “2016ರಲ್ಲಿ ಗೇಮಿಂಗ್ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ್ದೇನೆ. ಆದರೆ ಆ ರೀತಿ ಮಾಡುವುದು ಸರಿಯಲ್ಲ ಎಂದು ಅರಿತು ನಂತರ 2017ರಲ್ಲಿ ಪ್ರಚಾರವನ್ನು ನಿಲ್ಲಿಸಿದೆ. ಅಂದಿನಿಂದ, ನಾನು ಯಾವುದೇ ಗೇಮಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿಲ್ಲ. ಈ ವಿಚಾರದಲ್ಲಿ ಪೊಲೀಸರು ಸಂಪರ್ಕಿಸಿದರೆ ಪ್ರತಿಕ್ರಿಯಿಸುತ್ತೇನೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...