ನ್ಯೂಸ್‌ಕ್ಲಿಕ್ ವಿರುದ್ಧದ ಎಫ್‌ಐಆರ್ ರದ್ದು: ಸುಪ್ರೀಂ ಮೆಟ್ಟಿಲೇರಲು ಮುಂದಾದ ಇಡಿ

Date:

ವಿದೇಶಿ ನೇರ ಹೂಡಿಕೆ ಮಾನದಂಡಗಳ ಉಲ್ಲಂಘನೆ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾಗಿದೆ. ಹೈಕೋರ್ಟ್ ಪ್ರಾಸಿಕ್ಯೂಷನ್ ಎತ್ತಿದ ಹಲವಾರು ನಿರ್ಣಾಯಕ ವಾದಗಳನ್ನು “ಕಡೆಗಣಿಸಿದೆ ಅಥವಾ ಪರಿಹರಿಸದೆ ಬಿಡಲಾಗಿದೆ” ಎಂದು ಇಡಿ ವಾದಿಸಿದೆ.

- Advertisement -

ದೆಹಲಿ ಹೈಕೋರ್ಟ್‌ನ ನ್ಯಾ. ನೀನಾ ಬನ್ಸಾಲ್ ಕೃಷ್ಣ ಅವರಿದ್ದ ಪೀಠವು ಈ ಪ್ರಕರಣದ ತನಿಖೆಯನ್ನು “ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರ್ಬಳಕೆ” ಎಂದು ಬಲವಾಗಿ ಟೀಕಿಸಿದೆ. ನ್ಯಾಯಮೂರ್ತಿ ತಮ್ಮ 41 ಪುಟಗಳ ತೀರ್ಪಿನಲ್ಲಿ, “ಕ್ರಿಮಿನಲ್ ಪಿತೂರಿ ಇದೆ ಎಂಬ ಸ್ಪಷ್ಟ ಹೇಳಿಕೆಗಳನ್ನು ಹೊರತುಪಡಿಸಿ, ಸೆಕ್ಷನ್ 4 ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧವನ್ನು ಮಾಡಲಾಗಿದೆ ಎಂದು ಸೂಚಿಸುವ ಯಾವುದೇ ಆರೋಪದ ಪುರಾವೆ ಇಲ್ಲ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ಎಫ್‌ಐಆರ್ ವಿರುದ್ಧ ನ್ಯೂಸ್‌ಕ್ಲಿಕ್ ಸಂಸ್ಥಾಪಕರ ಅರ್ಜಿ; ಪೊಲೀಸರ ನಿಲುವು ಕೇಳಿದ ಹೈಕೋರ್ಟ್‌

ಈ ನಡುವೆ ಹೈಕೋರ್ಟ್ ಆದೇಶಕ್ಕೆ ನ್ಯೂಸ್‌ಕ್ಲಿಕ್ ಪ್ರತಿಕ್ರಿಯಿಸಿದೆ. “ನಮ್ಮ ಮೇಲಿರುವ ಹಲವಾರು ಪ್ರಕರಣಗಳು ಮತ್ತು ಆರೋಪಗಳು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗಳಾಗಿವೆ” ಎಂದು ಹೇಳಿದೆ. ಇವೆಲ್ಲ ಬೆಳವಣಿಗೆ ನಡುವೆ ಇಡಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಇನ್ನು ಈ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳ ಬಂಧನವನ್ನು “ಅಕ್ರಮ” ಎಂದೂ ದೆಹಲಿ ಕೋರ್ಟ್ ಘೋಷಿಸಿದೆ. ಇಬ್ಬರನ್ನೂ ಬಿಡುಗಡೆ ಮಾಡಲು ಆದೇಶಿಸಿದೆ.



WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಶಕಗಳಿಂದ ಯಾರು ಯಾರೋ ನನ್ನ ಕಥೆ ಹೇಳಿದ್ದಾರೆ, ಈಗ ನನ್ನ ಸರದಿ: ಸೋನಿಯಾ ಗಾಂಧಿ

ನನ್ನ ಜೀವನದ ಕಥೆಯನ್ನು ಇತರರು ದಶಕಗಳಿಂದ ಹೆಣೆಯುತ್ತಾ ಬಂದಿದ್ದರು. ಈಗ ನನ್ನ...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ...

ರಾಹುಲ್ ಗಾಂಧಿ ಅಕ್ರಮ ಆಸ್ತಿ ಆರೋಪ: ‘ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡ್ತೀರಾ’; ವಕೀಲರಿಗೆ ಸಿಜೆಐ ತರಾಟೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ...

ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ: ಡಿಪಿಡಿಪಿ ಕಾಯ್ದೆ ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ...