ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು, ವಿಶೇಷ ಸೌಲಭ್ಯವಲ್ಲ: ರಾಹುಲ್ ಗಾಂಧಿ

Date:

ದೇಶದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಶಿಕ್ಷಣ ಎಂಬುದು ಮೂಲಭೂತ ಹಕ್ಕಾಗಿದೆಯೇ ಹೊರತು ಅದು ಯಾರಿಗೋ ಸಿಗುವ ವಿಶೇಷ ಸೌಲಭ್ಯ ಅಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ನಾಸಿಕ್ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ ಅವರು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಆದಿವಾಸಿ ವಿದ್ಯಾರ್ಥಿಗಳ ನಿಯೋಗವನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು. ಆಶ್ರಮ ಶಾಲೆಗಳ ದುಸ್ಥಿತಿ, ಮೂಲಸೌಕರ್ಯ ಹಾಗೂ ವಸತಿ ನಿಲಯಗಳ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ರಾಹುಲ್ ಗಾಂಧಿ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮೆ ಬೇಡ, ನೀವು ಕ್ಷಮೆ ಕೇಳಿ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಂತರ ‘X’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡ ರಾಹುಲ್ ಗಾಂಧಿ, “ನಾಸಿಕ್‌ನಲ್ಲಿ ಬೇಡಿಕೆಗಳಿಗಾಗಿ ಹೋರಾಡುತ್ತಿರುವ ಆದಿವಾಸಿ ವಿದ್ಯಾರ್ಥಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ್ದೇನೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸುರಕ್ಷಿತ, ಗೌರವಾನ್ವಿತ ಮತ್ತು ಕಲಿಯಲು ಪೂರಕವಾದ ವಾತಾವರಣ ಸಿಗುವುದು ಅವರ ಹಕ್ಕಾಗಿದೆ” ಎಂದಿದ್ದಾರೆ.

ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, “ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ವಂಚಿತ ಸಮುದಾಯಗಳ ವಿದ್ಯಾರ್ಥಿಗಳನ್ನು ಸರ್ಕಾರಿ ವ್ಯವಸ್ಥೆಯು ನಿರ್ಲಕ್ಷಿಸಬಾರದು. ಬದಲಿಗೆ ಅವರಿಗೆ ಅಗತ್ಯವಿರುವ ಸಂಪೂರ್ಣ ನೆರವು ಮತ್ತು ಬೆಂಬಲವನ್ನು ನೀಡಬೇಕು. ಶಿಕ್ಷಣವು ಪ್ರತಿಯೊಬ್ಬರ ಹಕ್ಕು” ಎಂದು ಪ್ರತಿಪಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...