ಶಿಕ್ಷಣ ಸಚಿವರು ರಾಜೀನಾಮೆ ನೀಡಲೇಬೇಕು; ಕೇಂದ್ರದ ಜೊತೆಗಿನ ಸಭೆಗೂ ಮುನ್ನ ಕಾಕ್ರೋಚ್‌ಗಳ ಸ್ಪಷ್ಟ ಸಂದೇಶ

Date:

ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಹೊಸ ಕಾನೂನು ತರುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದಾಗ್ಯೂ, ನಾವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಮತ್ತು ನೀಟ್ ಅಕ್ರಮದಿಂದ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂಬ ಬೇಡಿಕೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿ ಸ್ಪಷ್ಟಪಡಿಸಿದೆ.

- Advertisement -

ಇಂದು, ನವದೆಹಲಿಯ ಸಂವಿಧಾನ ಭವನದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಸೇರಿದಂತೆ ಸರ್ಕಾರದ ಪ್ರತಿನಿಧಿಗಳನ್ನು ಸಿಜೆಪಿ ನಾಯಕರು ಭೇಟಿಯಾಗಲಿದ್ದಾರೆ. ಈ ಪ್ರಮುಖ ಸಭೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, “ನಮ್ಮ ವೇದಿಕೆಯ ಮುಖ್ಯ ಬೇಡಿಕೆಗಳು ಹಾಗೆಯೇ ಇರಲಿವೆ. ಅವು ಈಡೇರುವವರೆಗೆ ಪ್ರತಿಭಟನೆ ಮುಂದುವರಿಯಲಿದೆ. ಸರ್ಕಾರವು ಮುಕ್ತ ಮನಸ್ಸಿನಿಂದ ಬಂದು ಯುವಜನರ ಕಾಳಜಿ ಮತ್ತು ಕಳವಳಗಳನ್ನು ಆಲಿಸುತ್ತದೆ ಎಂಬ ಭರವಸೆಯಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಭೆಯಲ್ಲಿ ಭಾಗಿಯಾಗಲಿರುವ ಸಿಜೆಪಿ ಮುಖಂಡರು, “ಶಿಕ್ಷಣ ಸಚಿವರ ರಾಜೀನಾಮೆ, ಪರೀಕ್ಷಾ ಅಕ್ರಮ ಮತ್ತು ರದ್ದತಿಯಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ, ಹಾಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು” ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ ಸಂಸ್ಥಾಪಕ ಅಭೀಜಿತ್ ದಿಪ್ಕೆ, “ಸರ್ಕಾರದೊಂದಿಗಿನ ಸಭೆಯು ತಟಸ್ಥ ಸ್ಥಳದಲ್ಲಿ ನಡೆಯುತ್ತಿದೆಯಾದರೂ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯಲ್ಲಿ ಯಾವುದೇ ರಾಜಿ ಇಲ್ಲ. ಪ್ರತಿಭಟನಾಕಾರರ ಮೇಲೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒಪ್ಪಿಸಿದ ವಾಂಗ್ಚುಕ್ ಅವರ ಪ್ರಯತ್ನಕ್ಕೆ ಧನ್ಯವಾದಗಳು. ಸರ್ಕಾರವು ನಮ್ಮ ಬೇಡಿಕೆಗಳಿಗೆ ಲಿಖಿತ ಭರವಸೆ ನೀಡಬೇಕು” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಜೆನ್‌ ಝೀʼ | ಇದು ಹಣೆಪಟ್ಟಿಗಳ ಸೀಳಿ ಟಿಸಿಲೊಡೆದ ಹೊಸ ಪೀಳಿಗೆ!

ಸಭೆಯ ಹಿಂದಿನ ರಾತ್ರಿ ಪ್ರಧಾನಿ ಮೋದಿ ಅವರು ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಹೊಸ ಕಠಿಣ ಕಾನೂನು ತರುವುದಾಗಿ ವಿಡಿಯೋ ಸಂದೇಶದ ಮೂಲಕ ಭರವಸೆ ನೀಡಿದ್ದರು. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ವಾಂಗ್ಚುಕ್ ತಮ್ಮ 26 ದಿನಗಳ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರು. ಉಪವಾಸ ಕೈಬಿಟ್ಟ ವಾಂಗ್ಚುಕ್, “ಪರೀಕ್ಷಾ ಅಕ್ರಮದ ಕುರಿತು ಚರ್ಚೆ, ಸಂತ್ರಸ್ತರಿಗೆ ಪರಿಹಾರ ಮತ್ತು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸದಿರಲು ಸರ್ಕಾರ ಭರವಸೆ ನೀಡಿದೆ” ಎಂದು ಹೇಳಿದ್ದಾರೆ.

ದೇಶದ ಸಾಕ್ಷಿಪ್ರಜ್ಞೆಯನ್ನು ಜಾಗೃತಗೊಳಿಸಿದ ವಾಂಗ್ಚುಕ್ ಅವರ ಸತ್ಯಾಗ್ರಹ ಮುಕ್ತಾಯಗೊಂಡಿರುವುದು ಸಮಾಧಾನ ತಂದಿದೆ ಎಂದಿರುವ ಸಿಜೆಪಿ, “ಶಿಕ್ಷಣ ಸಚಿವರು ರಾಜೀನಾಮೆ ನೀಡುವವರೆಗೆ ಜಂತರ್ ಮಂತರ್‌ನಲ್ಲಿ ತಮ್ಮ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ” ಎಂದು ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...