ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

Date:

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ತೃಣಮೂಲ ಕಾಂಗ್ರೆಸ್‌ (TMC) ಶಾಸಕ ಕುನಾಲ್ ಘೋಷ್ ಅವರ ಕಾರಿನ ಮೇಲೆ ಶನಿವಾರ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆದಿದೆ. ಹೂಗ್ಲಿ ಜಿಲ್ಲೆಯ ಶ್ರೀರಾಮಪುರಕ್ಕೆ ತೆರಳುತ್ತಿದ್ದ ವೇಳೆ ಉತ್ತರಪಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

- Advertisement -

ಕಪ್ಪು ಬಾವುಟ ಹಿಡಿದಿದ್ದ ಗುಂಪೊಂದು ಕುನಾಲ್ ಅವರ ಕಾರನ್ನು ಸುತ್ತುವರಿದು ಘೋಷಣೆಗಳನ್ನು ಕೂಗಿದೆ. ಬಳಿಕ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲುಗಳನ್ನು ತೂರಲಾಗಿದ್ದು, ಹಿಂಬದಿಯ ಗಾಜು ಒಡೆದಿದೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

ಘಟನೆ ಕುರಿತು ಪ್ರತಿಕ್ರಿಯಿಸಿದ ಕುನಾಲ್ ಘೋಷ್, “ಇದು ಜಂಗಲ್‌ರಾಜ್‌. ಕಲ್ಲು ಹಾಗೂ ಮೊಟ್ಟೆಗಳಿಂದ ನನ್ನ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ರಸ್ತೆ ತಡೆದು ನಿಲ್ಲಿಸಲಾಯಿತು. ಸ್ಥಳದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿ ಇರಲಿಲ್ಲ” ಎಂದು ಆರೋಪಿಸಿದರು. ಘಟನೆ ಕುರಿತು ದೂರು ದಾಖಲಿಸಲು ಕೋಲ್ಕತ್ತಾಗೆ ಹಿಂದಿರುಗುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ದಾಳಿಯ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದಾರೆ.

ಇದೇ ವೇಳೆ, ಶ್ರೀರಾಮಪುರದ ಕೋರ್ಟ್ ಮೈದಾನದಲ್ಲಿ ನಡೆಯಲಿರುವ ಮಮತಾ ಬ್ಯಾನರ್ಜಿ ಅವರ ಸಾರ್ವಜನಿಕ ಸಭೆಗೆ ಮುನ್ನ ಟಿಎಂಸಿ ಹಾಗೂ ಪೊಲೀಸರ ನಡುವೆ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಸಭೆಗೆ ಅನುಮತಿ ನೀಡುವ ವಿಚಾರದಲ್ಲಿಯೂ ತಮ್ಮನ್ನು ಗುರಿಯಾಗಿಸಲಾಗಿದೆ ಎಂದು ಟಿಎಂಸಿ ನಾಯಕರು ಆರೋಪಿಸಿದ್ದರು. ಕಲ್ಕತ್ತಾ ಹೈಕೋರ್ಟ್ ಕೆಲವು ಷರತ್ತುಗಳೊಂದಿಗೆ ಸಭೆಗೆ ಅನುಮತಿ ನೀಡಿತ್ತು. ಸಭೆಗೆ ಹಾಜರಾಗುವವರ ಸಂಖ್ಯೆಗೆ ಮಿತಿ ಹಾಗೂ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸುವಂತೆ ನ್ಯಾಯಾಲಯ ಸೂಚಿಸಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೋದರ ಸೊಸೆ ಶವವಾಗಿ ಪತ್ತೆ

ರ‍್ಯಾಲಿಗೆ ಒಂದು ದಿನ ಮುನ್ನ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರನ್ನು, ಮಹಿಳೆಯರನ್ನೂ ಒಳಗೊಂಡಂತೆ, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪಕ್ಷ ಆರೋಪಿಸಿತ್ತು. ಶ್ರೀರಾಮಪುರ ಸಂಸದ ಕಲ್ಯಾಣ್ ಬ್ಯಾನರ್ಜಿ ಈ ಕ್ರಮವನ್ನು ಖಂಡಿಸಿದ್ದರು.

ಈ ಕುರಿತು ಶ್ರೀರಾಮಪುರ ಜಿಲ್ಲಾ ಟಿಎಂಸಿ ಸಂಚಾಲಕ ಅಸಿತ್ ಮಜುಂದಾರ್ ಕೂಡ ಪೊಲೀಸರ ವಿರುದ್ಧ ಆರೋಪ ಮಾಡಿದ್ದು, ಹೈಕೋರ್ಟ್‌ ಆದೇಶ ಪಾಲನೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ ಪಕ್ಷದ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾರ್ಯಕ್ರಮದ ಸಿದ್ಧತೆಗಳಿಗೆ ಅಡ್ಡಿಪಡಿಸಲಾಗಿದೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ಕುನಾಲ್ ಘೋಷ್ ಅವರ ಕಾರಿನ ಮೇಲಿನ ದಾಳಿ ಘಟನೆ ರ‍್ಯಾಲಿಗೂ ಮುನ್ನ ಪಶ್ಚಿಮ ಬಂಗಾಳದಲ್ಲಿ ಮತ್ತಷ್ಟು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...