ಉತ್ತರ ಪ್ರದೇಶ | ಭೀಕರ ಅಪಘಾತ; ಮೂವರು ಮಕ್ಕಳು ಸೇರಿ ಎಂಟು ಮಂದಿ ಸಾವು

Date:

ಕಡಾ ಧಾಮ ಶೀತ್ಲಾ ಮಾತಾ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರಿಂದ ಪಿಕಪ್ ಟ್ರಕ್ ನಿಂತಿದ್ದ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಮಕ್ಕಳು, ಐವರು ಮಹಿಳೆಯರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

- Advertisement -

ಸೈನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಫತೇಪುರದಿಂದ ಪ್ರಯಾಗ್‌ರಾಜ್‌ಗೆ ಹೋಗುತ್ತಿದ್ದ ಪಿಕಪ್ ವಾಹನವು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಸೌದಿ ಅರೇಬಿಯಾ | ಭೀಕರ ಅಪಘಾತ: ಉಮ್ರಾ ಯಾತ್ರೆಗೆ ತೆರಳಿದ್ದ 42 ಭಾರತೀಯರು ಮೃತ್ಯು

ಅಪಘಾತ ಸಂಭವಿಸಿದಾಗ ಟ್ರಕ್‌ನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 12ಕ್ಕೂ ಅಧಿಕ ಭಕ್ತರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಪ್ರಯಾಗ್‌ರಾಜ್ ಜ್ಯೋತಿ ನಾರಾಯಣ್ ಪಿಟಿಐಗೆ ಮಾಹಿತಿ ನೀಡಿದ್ದು, “ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನು ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...