ಛತ್ತೀಸ್‌ಗಢ | ಎನ್‌ಕೌಂಟರ್‌; ಎಂಟು ನಕ್ಸಲರು ಹತ

Date:

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರಲ್ಲಿ ಇನ್ಸಾಸ್ ರೈಫಲ್ ಮತ್ತು ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್) ಕೂಡಾ ಸೇರಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ದಲಿತ ಬಾಲಕಿ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಿಗೆ ಮರಣ ದಂಡನೆ

ಛತ್ತೀಸ್‌ಗಢದ ಬಿಜಾಪುರದ ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಶನಿವಾರ ಬೆಳಿಗ್ಗೆ 8.30 ಸುಮಾರಿಗೆ ರಾಜ್ಯ ಪೊಲೀಸರ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.

ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿಗಳು) ಪಶ್ಚಿಮ ಬಸ್ತಾರ್ ವಿಭಾಗದ ಕಾರ್ಯಕರ್ತರು ಈ ಪ್ರದೇಶದಲ್ಲಿ ಇದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಶುಕ್ರವಾರದಿಂದ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ನಕ್ಸಲ್ ಹೋರಾಟ ತ್ಯಜಿಸಿ ಮುಖ್ಯವಾಹಿನಿಗೆ ಬಂದ ರವೀಂದ್ರ ಕೋಟೆಹೊಂಡ

“ಘಟನಾ ಸ್ಥಳದಿಂದ ಎಂಟು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಅನೇಕ ನಕ್ಸಲರು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ” ಎಂದು ಸುಂದರ್‌ರಾಜ್ ಹೇಳಿದರು.

ಛತ್ತೀಸ್‌ಗಢದಲ್ಲಿ ಸರ್ಕಾರವು ನಕ್ಸಲ್ ವಿರೋಧಿ ಕಾರ್ಯಾಚರಣೆ ಹೆಸರಲ್ಲಿ ಈ ವರ್ಷದ ಒಂದು ತಿಂಗಳಲ್ಲಿ ಈಗಾಗಲೇ 50 ಮಂದಿಯನ್ನು ಕೊಂದಿದ್ದಾರೆ. ಈ ಪೈಕಿ ನಕ್ಸಲರು ಎಂದು ಹಣೆಪಟ್ಟಿ ಕಟ್ಟಿ ಆದಿವಾಸಿಗಳನ್ನು ಕೂಡಾ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಜನವರಿ 20-21ರಂದು ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 16 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...