ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆ ಪರವಾನಗಿ ಪಡೆದ ಘಟಕವಾಗಿದೆ. ಸ್ಫೋಟಕ್ಕೆ ಕಾರಣವೇನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
#WATCH | Tamil Nadu: 8 people died after an explosion took place at a firecracker manufacturing unit near Sivakasi in Virudhunagar district.
(Visuals from the spot) https://t.co/cEiteVVzls pic.twitter.com/BYqls7uthB
— ANI (@ANI) May 9, 2024
ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಮೃತಪಟ್ಟ ಎಂಟು ಮಂದಿ ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಫೋಟದ ನಂತರ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.
ಸದ್ಯ ಬೆಂಕಿಗೆ ಕಾರಣ ಸ್ಪಷ್ಟವಾಗಿಲ್ಲ. ಗಂಭೀರವಾಗಿ ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಖಾನೆ ಆವರಣವನ್ನು ದಟ್ಟ ಹೊಗೆ ಆವರಿಸಿಕೊಂಡಿದೆ.
ತಮಿಳುನಾಡಿನ ಶಿವಕಾಶಿಯನ್ನು ಭಾರತದ ಪಟಾಕಿ ತಯಾರಿಕಾ ಕೇಂದ್ರ ಎಂದು ಕರೆಯಲಾಗುತ್ತದೆ. ಇಲ್ಲಿಂದ ಪಟಾಕಿ, ಸುರಕ್ಷತಾ ಬೆಂಕಿಕಡ್ಡಿ ವಸ್ತುಗಳನ್ನು ತಯಾರಿಸಿ ಇಡೀ ದೇಶಕ್ಕೆ ಸರಬರಾಜು ಮಾಡಲಾಗುತ್ತದೆ.
“Saddened to learn about the loss of many lives due to an explosion at a firecracker factory near Sivakasi, Tamil Nadu. I convey my heartfelt condolences to the bereaved families. I pray for speedy recovery of the injured,” posts @rashtrapatibhvn. pic.twitter.com/yG2V1iMh1p
— Press Trust of India (@PTI_News) May 9, 2024
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, “ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದ ಹಲವಾರು ಜೀವಗಳನ್ನು ಕಳೆದುಕೊಂಡಿರುವ ಬಗ್ಗೆ ತಿಳಿದು ದುಃಖವಾಯಿತು. ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ ತಿಳಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.
