ಚುನಾವಣೆ ಗೆದ್ದರೆ ಶಾಸಕರಿಗೆ ತಲಾ 50 ಕೋಟಿ ರೂ. ನೀಡುವುದಾಗಿ ಶಿಂದೆ ಭರವಸೆ: ಸಂಜಯ್ ರಾವತ್

Date:

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಶಾಸಕರಿಗೆ 50 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು ರಾಜ್ಯದ ಸುಮಾರು 150 ಶಾಸಕರು ಈವರೆಗೆ ತಲಾ 15 ಕೋಟಿ ರೂಪಾಯಿ ನೀಡಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಸೋಮವಾರ ಆರೋಪಿಸಿದ್ದಾರೆ.

- Advertisement -

ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ (ಯುಬಿಟಿ) ನಾಯಕ ರಾವತ್, “ನಿನ್ನೆ 2 ವಾಹನಗಳಲ್ಲಿ ಸುಮಾರು 15 ಕೋಟಿ ರೂಪಾಯಿ ಇತ್ತು. ನಾನು ಮೊದಲೇ ಹೇಳಿದಂತೆ, ಏಕನಾಥ್ ಶಿಂದೆ ಅವರು ತಮ್ಮ ಜನರಿಗೆ ತಲಾ 50 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಇದು ಮೊದಲ ಕಂತಿನ 15 ಕೋಟಿ ರೂ. ಆಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಎರಡು ವಾಹನಗಳಿದ್ದವು. ಅಲ್ಲಿ ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್ ಮೊದಲು ಶಾಸಕರ ಸೇವೆಯಲ್ಲಿದ್ದ ಕಾರಣ ಕರೆ ಬಂದ ಬಳಿಕ ಒಂದು ವಾಹನವನ್ನು ಬಿಟ್ಟಿದ್ದಾರೆ. ರಾಜ್ಯದ ಸುಮಾರು 150 ಶಾಸಕರು ಈವರೆಗೆ ತಲಾ 15 ಕೋಟಿ ರೂಪಾಯಿ ಪಡೆದಿದ್ದಾರೆ” ಎಂದು ರಾವತ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಮಾನನಷ್ಟ ಮೊಕದ್ದಮೆ | ಸಂಜಯ್ ರಾವತ್‌ಗೆ 15 ದಿನಗಳ ಜೈಲು ಶಿಕ್ಷೆ

ಅಕ್ಟೋಬರ್ 21ರಂದು ಸಂಜೆ ಪುಣೆ ಗ್ರಾಮಾಂತರ ಪೊಲೀಸರು ಖೇಡ್ ಶಿವಪುರ ಟೋಲ್ ಬೂತ್‌ನಲ್ಲಿ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದಾದ ಬಳಿಕ ಸಂಜಯ್ ರಾವತ್ ಈ ಹೇಳಿಕೆ ನೀಡಿದ್ದಾರೆ.

“ಖೇಡ್ ಶಿವಪುರ ಟೋಲ್ ನಾಕಾದಲ್ಲಿ ಪುಣೆ ಗ್ರಾಮಾಂತರ ಪೊಲೀಸರಿಗೆ ಕಾರಿನಲ್ಲಿ ಒಟ್ಟು 5 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಚಾಲಕ ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಹೇಳಿದ್ದಾರೆ. ಹೆಚ್ಚಿನ ತನಿಖೆಗಾಗಿ ನಗದನ್ನು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

ನವೆಂಬರ್ 20ರಂದು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದ್ದು ನವೆಂಬರ್ 23ಕ್ಕೆ ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...