ಮಹಾರಾಷ್ಟ್ರ ನೂತನ ಸರ್ಕಾರ ರಚನೆ ವಿಳಂಬ: ಏಕನಾಥ್ ಶಿಂದೆ ಕಾರಣವಲ್ಲ ಎಂದ ಶಿವಸೇನೆ

Date:

ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆ ಕುರಿತು ಅಂತಿಮ ನಿರ್ಣಯ ಹೊರಬೀಳದ ಕುರಿತು ಹರಡಿರುವ ವದಂತಿಗಳನ್ನು ಅಲ್ಲಗಳೆದಿರುವ ಶಿವಸೇನೆ ನಾಯಕ ದೀಪಕ್ ಕೇಸರ್ಕರ್ ಮಹಾರಾಷ್ಟ್ರ ನೂತನ ಸರ್ಕಾರ ರಚನೆ ವಿಳಂಬಗೊಳ್ಳಲು ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಕಾರಣವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

ಡಿಸೆಂಬರ್ 5ರಂದು ನೂತನ ಸರ್ಕಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಿಗದಿಗೊಂಡಿದ್ದು, ರಾಜ್ಯದ ಮುಂದಿನ ನಾಯಕನನ್ನು ಅಂತಿಮಗೊಳಿಸುವ ಚರ್ಚೆಗಳು ಸುಗಮವಾಗಿ ಪ್ರಗತಿಯಲ್ಲಿವೆ ಎಂದು ಅವರು ಒತ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗದಿರಲು ಏಕನಾಥ್ ಶಿಂದೆ ಕಾರಣ ಅಲ್ಲ. ಬಿಜೆಪಿ ವೀಕ್ಷಕರನ್ನು ನೇಮಿಸಿದ್ದು, ಇಂದು ಮುಖ್ಯಮಂತ್ರಿಯ ಹೆಸರು ಪ್ರಕಟಗೊಳ್ಳಲಿದೆ ಎಂದು ದೀಪಕ್ ಕೇಸರ್ಕರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ಮುಖ್ಯಮಂತ್ರಿ ಹುದ್ದೆ ಕುರಿತು ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾಗೆ ಏಕನಾಥ್ ಶಿಂದೆ ನೀಡಿದ್ದಾರೆ ಎಂದು ಪುನರುಚ್ಚರಿಸಿದ ಕೇಸರ್ಕರ್, ಮಹಾಯುತಿ ಮೈತ್ರಿಕೂಟದ ಒಗ್ಗಟ್ಟಿಗೆ ಶಿಂದೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್ 23ರಂದು ಪ್ರಕಟಗೊಂಡಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ, ಶಿವಸೇನೆ ಹಾಗೂ ಎನ್‌ಸಿಪಿಯನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟ, 288 ಸ್ಥಾನಗಳ ಪೈಕಿ 230 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...