ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

Date:

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವಂತೆ ಪಕ್ಷವು ಪ್ರಚಾರಕ್ಕೆ ಬದ್ಧರಾಗಿರಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ.

- Advertisement -

ಪ್ರಮಾಣೀಕರಣಕ್ಕಾಗಿ ಅಗತ್ಯವಿರುವ ಸ್ಪಷ್ಟೀಕರಣಗಳನ್ನು ಅಳವಡಿಸಿದ ನಂತರ ಎಎಪಿ ಚುನಾವಣಾ ಪ್ರಚಾರಕ್ಕಾಗಿ ಮರು ಸಲ್ಲಿಕೆ ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪ್ರಚಾರದ ಹಾಡಿನ ವಿಷಯವು ನ್ಯಾಯಾಂಗದ ಮೇಲೆ ಸ್ಪಷ್ಟವಾಗಿ ಪ್ರತಿಕೂಲ ಪರಿಣಾಮ ಬೀರಲಿದ್ದು, ಇದು ಚುನಾವಣಾ ಆಯೋಗದ ನಿಯಮಗಳು ಹಾಗೂ ಜಾಹೀರಾತು ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಚುನಾವಣಾ ಆಯೋಗವು ನೋಟಿಸ್‌ನಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?  ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಸೆರೆಮನೆಯ ಹಿಂದೆ ಅರವಿಂದ್ ಕೇಜ್ರಿವಾಲ್ ನಿಂತಿರುವ ‘ಜೇಲ್‌ ಕೆ ಜವಾಬ್‌ ಮೆ ಹಮ್ ವೋಟ್ ದೇಂಗೆ’ ಸಾಲು ಜನರಲ್ಲಿ ಆಕ್ರಮಣಕಾರಿ ಸ್ವಭಾವವನ್ನು ಹುಟ್ಟುಹಾಕುತ್ತದೆ.  ಈ ಸಾಲನ್ನು ಜಾಹೀರಾತಿನಲ್ಲಿ ಹಲವು ಬಾರಿ ಬಳಸಲಾಗಿರುವುದರಿಂದ ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ ನಿಯಮಗಳ 1994ರ ಜಾಹೀರಾತು ನಿಯಮಗಳು ಒಳಗೊಂಡಿರುವ ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ನಿಯಮ 6(1(ಜಿ)ರಡಿಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆಯೋಗ ತಿಳಿಸಿದೆ.

ಈ ನಡುವೆ ಎಎಪಿ ನಾಯಕಿ ಅತಿಶಿ ಅವರು ಚುನಾವಣಾ ಆಯೋಗ ಎಎಪಿಯ ಪ್ರಚಾರದ ಹಾಡನ್ನು ನಿಷೇಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮೂಲಕ ಚುನಾವಣಾ ಆಯೋಗದ ಕ್ರಮಕೈಗೊಳ್ಳುವ ಮೂಲಕ ರಾಜಕೀಯ ಅಸ್ತ್ರವನ್ನು ಎಎಪಿ ಮೇಲೆ ಬಳಸಲಾಗುತ್ತಿದೆ ಎಂದು ಅತಿಶಿ ತಿಳಿಸಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಪ್ರಚಾರದ ಹಾಡನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಎಎಪಿಯ ಪ್ರಚಾರದ ಹಾಡನ್ನು ನಿಷೇಧಿಸುವ ಮೂಲಕ ಬಿಜೆಪಿ ಮತ್ತೊಂದು ಅಸ್ತ್ರ ಬಳಸಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...