ಬಿಜೆಪಿ ಜತೆ ಕೆಲಸ ಮಾಡುವ ಮೂಲಕ ಚುನಾವಣಾ ಆಯೋಗವು (ಇಸಿ) ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳ ಮೇಲೆ ‘ಪ್ರಭಾವ’ ಬೀರಲು ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್, “ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳನ್ನು ವರ್ಗಾಯಿಸಿದೆ. ಆದರೆ ಉತ್ತರ ಪ್ರದೇಶದ ವಿಧಾನಸಭಾ ಉಪಚುನಾವಣೆಯಲ್ಲಿ ಅಕ್ರಮಗಳನ್ನು ಎಸಗಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ” ಎಂದು ದೂರಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಯುಡಿಎಫ್ ಪ್ರಣಾಳಿಕೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿ ಐದು ಗ್ಯಾರಂಟಿಗಳ ಘೋಷಣೆ
“ನಾವು ಪದೇ ಪದೇ ದೂರು ನೀಡಿದ್ದರೂ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಜೆಂಟ್‌ಗಳಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿಲ್ಲ” ಎಂದು ಆರೋಪಿಸಿದ್ದಾರೆ.
“ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಲ್ಲಿ ಚುನಾವಣೆ ಮುಗಿದ ನಂತರ, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯತ್ತ ಬಿಜೆಪಿ ಚುನಾವಣಾ ಯಂತ್ರ ಗಮನ ಹರಿಸಲಿದೆ. ಚುನಾವಣೆ ನಡೆಯುವ ರಾಜ್ಯಗಳಲ್ಲಿ ಚುನಾವಣಾ ಆಯೋಗ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿರುವುದು ನಮಗೆ ಸ್ಪಷ್ಟವಾಗಿ ತಿಳಿಯುತ್ತಿದೆ” ಎಂದೂ ಹೇಳಿದ್ದಾರೆ.




