ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ರಾಜಕೀಯ ನಾಯಕರಿಗೆ ಚುನಾವಣಾ ಆಯೋಗ ಎಚ್ಚರಿಕೆ

Date:

ಕಾಂಗ್ರೆಸ್‌ನ ಸುಪ್ರಿಯಾ ಶ್ರೀನಾಥೆ ಮತ್ತು ಬಿಜೆಪಿಯ ದಿಲೀಪ್ ಘೋಷ್ ಅವರ ವಿವಾದಾತ್ಮಕ ಹೇಳಿಕೆಗಳ ನಂತರ, ಭಾರತದ ಚುನಾವಣಾ ಆಯೋಗ ಸೋಮವಾರ “ಮಾದರಿ ನೀತಿ ಸಂಹಿತೆಯ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆಗಳಲ್ಲಿ ಜಾಗರೂಕರಾಗಿರಿ” ಎಂದು ನಾಯಕರಿಗೆ ಎಚ್ಚರಿಕೆ ನೀಡಿದೆ.

- Advertisement -

ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಆದೇಶದಲ್ಲಿ, ಎಂಸಿಸಿ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ ನಂತರ ಚುನಾವಣಾ ಆಯೋಗವು ಇಬ್ಬರು ನಾಯಕರ ಉತ್ತರಗಳನ್ನು ಸ್ವೀಕರಿಸಿದ ನಂತರ ಎಚ್ಚರಿಕೆ ನೀಡಿದ್ದು, ಮಹಿಳೆಯರ ಘನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಖಂಡನೀಯ ಎಂದು ದಿಲೀಪ್ ಘೋಷ್ ಮತ್ತು ಸುಪ್ರಿಯಾ ಶ್ರಿನಾಥೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನೀತಿ ಸಂಹಿತೆ ಉಲ್ಲಂಘನೆಗಳ ಬಗ್ಗೆ ನಾಯಕರುಗಳಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸ್ವೀಕರಿಸಿದ ನಂತರ ಆಯೋಗವು ಇಂದು ತನ್ನ ಆದೇಶದಲ್ಲಿ, ಅವರು ಕೆಳಮಟ್ಟದ ವೈಯಕ್ತಿಕ ದಾಳಿಯನ್ನು ಮಾಡಿದ್ದಾರೆ. ಇದರಿಂದಾಗಿ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆಂದು ಅವರಿಗೆ ಮನವರಿಕೆಯಾಗಿದೆ” ಎಂದು  ತಿಳಿಸಿದೆ. ಎಂಸಿಸಿ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆಗಳಲ್ಲಿ ಜಾಗರೂಕರಾಗಿರಲು ಚುನಾವಣಾ ಆಯೋಗವು ನಾಯಕರಿಗೆ ಎಚ್ಚರಿಕೆ ನೀಡಿದೆ.

“ಈ ಸಮಯದಿಂದ ಅವರ ಚುನಾವಣೆಗೆ ಸಂಬಂಧಿಸಿದ ಸಂವಹನಗಳನ್ನು ಆಯೋಗವು ವಿಶೇಷವಾಗಿ ಮತ್ತು ಹೆಚ್ಚುವರಿಯಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಾರ್ವಜನಿಕ ಡೊಮೇನ್‌ನಲ್ಲಿ ಸಂವಹನ ನಡೆಸುವಾಗ ಜಾಗರೂಕರಾಗಿರುವಂತೆ ಹಾಗೂ ಅಂತಹ ಯಾವುದೇ ಅವಹೇಳನಕಾರಿ ಪ್ರತಿಕ್ರಿಯೆಗಳು ಮತ್ತು ನೀತಿ ಸಂಹಿತೆ ಮಾರ್ಗಸೂಚಿಗಳ ಉಲ್ಲಂಘನೆ ನಡೆಸದಂತೆ ತಮ್ಮ ಕಾರ್ಯಕರ್ತರನ್ನು ಸಂವೇದನಾಶೀಲಗೊಳಿಸಲು ಪಕ್ಷದ ಮುಖ್ಯಸ್ಥರಿಗೆ ಎಚ್ಚರಿಕೆ ನೋಟಿಸ್‌ನ ಪ್ರತಿಯನ್ನೂ ಕೂಡ ನೀಡಲಾಗಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಂಗನಾ ರಣಾವತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ವೇದಿಕೆಯ ಅಧ್ಯಕ್ಷೆ ಸುಪ್ರಿಯಾ ಶ್ರಿನಾಥೆ ಅವರಿಗೆ ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಮತ್ತು ಅಗೌರವದ ಕಾಮೆಂಟ್ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳದ ಸಂಸದ ದಿಲೀಪ್ ಘೋಷ್ ಇಬ್ಬರಿಗೂ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮೈತ್ರಿ ಬೆನ್ನಲ್ಲೇ ಆರ್‌ಎಲ್‌ಡಿಗೆ ಆಘಾತ; ಪಕ್ಷ ತೊರೆದ ರಾಷ್ಟ್ರೀಯ ಉಪಾಧ್ಯಕ್ಷ!

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....