‘ಇಂಡಿಯಾ’ ಸಂಕ್ಷಿಪ್ತ ರೂಪ; ರಾಜಕೀಯ ಮೈತ್ರಿ ನಿಯಂತ್ರಣ ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ

Date:

Advertisements

ರಾಜಕೀಯ ಪಕ್ಷಗಳು ‘ಇಂಡಿಯಾ’ ಎಂಬ ಸಂಕ್ಷಿಪ್ತ ರೂಪ ಬಳಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮುಂದೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗವು (ಇಸಿಐ) ರಾಜಕೀಯ ಮೈತ್ರಿಗಳನ್ನು ನಿಯಂತ್ರಿಸುವ ಅಧಿಕಾರ ತನಗೆ ಇಲ್ಲ ಎಂದು ಹೇಳಿದೆ.

ಜನಪ್ರತಿನಿಧಿ ಕಾಯಿದೆ- 1951ರ ಅಡಿ “ರಾಜಕೀಯ ಪಕ್ಷ”ವೊಂದರ ವ್ಯಕ್ತಿಗಳನ್ನು ಅಥವಾ ಸಂಘ ಸಂಸ್ಥೆಗಳ ಒಕ್ಕೂಟಗಳನ್ನು ನೋಂದಾಯಿಸುವ ಅಧಿಕಾರ ಮಾತ್ರ ತನಗೆ ಇದೆ ಎಂದು ಅದು ಹೇಳಿದೆ.

ರಾಜಕೀಯ ಮೈತ್ರಿಯನ್ನು ಜನಪ್ರತಿನಿಧಿ ಕಾಯಿದೆ ಅಥವಾ ಸಂವಿಧಾನದ ಅಡಿ ನಿಯಂತ್ರಿತ ಘಟಕವಾಗಿ ಗುರುತಿಸಲಾಗಿಲ್ಲ ಎಂದು ಆಯೋಗವು ತಿಳಿಸಿದೆ.

Advertisements

ಜನಪ್ರತಿನಿಧಿ ಕಾಯಿದೆ, 1951ರ (ಆರ್‌ಪಿ ಕಾಯಿದೆ) ಸೆಕ್ಷನ್ 29 ಎ ಪ್ರಕಾರ ರಾಜಕೀಯ ಪಕ್ಷದ ಸಂಸ್ಥೆಗಳು ಅಥವಾ ವ್ಯಕ್ತಿಗಳ ಸಂಘಗಳನ್ನು ನೋಂದಾಯಿಸುವ ಅಧಿಕಾರವನ್ನು ತಾನು ಹೊಂದಿದ್ದು ರಾಜಕೀಯ ಮೈತ್ರಿಯನ್ನು ಜನಪ್ರತಿನಿಧಿ ಕಾಯಿದೆ ಅಥವಾ ಸಂವಿಧಾನದ ಅಡಿ ನಿಯಂತ್ರಿಸಬಹುದಾದ ಘಟಕವಾಗಿ ಗುರುತಿಸಲಾಗಿಲ್ಲ ” ಎಂದು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಪಾಪ, ನವರಸ ನಾಯಕ ಜಗ್ಗೇಶಿ ತಮ್ಮ ನವರಸಗಳನ್ನೆಲ್ಲ ಹುಲಿ ಉಗುರಿನ ಲಾಕೆಟ್‌ನಲ್ಲಿ ಇಟ್ಟಿದ್ದರಂತೆ!

ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಕುರಿತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಗಿರೀಶ್ ಭಾರದ್ವಾಜ್ ಎಂಬುವವರು, ‘ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂಬ ಸಂಕ್ಷಿಪ್ತ ರೂಪವನ್ನು ಬಳಸುವ ಮೂಲಕ, ಕೆಲ ರಾಜಕೀಯ ಪಕ್ಷಗಳು ಅನಗತ್ಯವಾಗಿ ದೇಶದ ಹೆಸರಿನ ಲಾಭ ಪಡೆದುಕೊಳ್ಳುತ್ತಿವೆ’ ಎಂದು ದೂರಿದ್ದರು.

ಈ ರೀತಿಯ ಹೆಸರಿಟ್ಟುಕೊಳ್ಳುವುದು “2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ, ಪಾರದರ್ಶಕ ಮತ್ತು ನ್ಯಾಯಸಮ್ಮತವಾದ ಮತ ಚಲಾವಣೆ  ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ‘ಇಂಡಿಯಾ’ ಎಂಬ ಸಂಕ್ಷಿಪ್ತ ರೂಪ ಬಳಕೆ ಮಾಡುವುದಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಬೇಕು ಹಾಗೂ ‘ಇಂಡಿಯಾ’ ಅಕ್ಷರಗಳನ್ನು ಮುದ್ರಿಸಿರುವ ರಾಷ್ಟ್ರ ಧ್ವಜದ ಬಳಕೆಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಈ ಕುರಿತು ಆಗಸ್ಟ್‌ನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್ 26 ವಿರೋಧ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿತ್ತು. ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಮತ್ತು ಇಸಿಐ ಪ್ರತಿಕ್ರಿಯೆಯನ್ನೂ ಕೋರ್ಟ್ ಕೇಳಿತ್ತು. ಪ್ರಕರಣದ ಸಂಬಂಧ ಮಂಗಳವಾರ ಹೈಕೋರ್ಟ್ ವಿಚಾರಣೆ ನಡೆಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X