ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ.
ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಯ ಅವಧಿಯು ನವೆಂಬರ್ 3 ಮತ್ತು ನವೆಂಬರ್ 26 ರಂದು ಮತ್ತು ಜಾರ್ಖಂಡ್ ರಾಜ್ಯದ ಚುನಾಯಿತ ಸರ್ಕಾರದ ಅವಧಿ ಮುಂದಿನ ವರ್ಷ ಜನವರಿಯಲ್ಲಿ ಕೊನೆಗೊಳ್ಳಲಿದೆ. ಸಂವಿಧಾನದ 370ನೇ ವಿಧಿ ರದ್ದತಿಯ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಜಮ್ಮು ಮತ್ತು ಕಾಶ್ಮೀರದ ಚುನಾವಣೆಗಳು ಸಹ ನಡೆಯಬೇಕಿದೆ. 2018 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರವಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ
ಈ ಹಿಂದೆ, ಚುನಾವಣಾ ಆಯೋಗವು ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸಿದರೆ, ಜಾರ್ಖಂಡ್‌ನ ಚುನಾವಣೆಗಳನ್ನು ಪ್ರತ್ಯೇಕವಾಗಿ ನಡೆಸಲಾಗಿತ್ತು.
ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ, ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.
