ಚುನಾವಣಾ ಆಯುಕ್ತರ ನೇಮಕ ಕಾಯ್ದೆ: ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಕುರಿತು ಸುಪ್ರೀಂ ಭಿನ್ನಮತದ ತೀರ್ಪು

Date:

ಚುನಾವಣಾ ಆಯುಕ್ತರ ನೇಮಕ ಕಾಯ್ದೆ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ (ಸಂವಿಧಾನ ಪೀಠಕ್ಕೆ) ವಹಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ‘ಭಿನ್ನಮತದ ತೀರ್ಪು’ (Split verdict) ನೀಡಿದೆ.​ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಕೈಬಿಟ್ಟಿದ್ದ ಕೇಂದ್ರ ಸರ್ಕಾರದ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಪೀಠದಲ್ಲಿದ್ದ ನ್ಯಾಯಮೂರ್ತಿ ದೀಪಂಕರ್ ದತ್ತಾ ಹಾಗೂ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ನಡುವೆ ಯಾವುದೇ ಒಮ್ಮತ ಮೂಡಿಲ್ಲ.

- Advertisement -

ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪನ್ನು ಬದಿಗೊತ್ತಿ, ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಈ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕೆಂಬ ಕೋರಿಕೆಯ ಮೇರೆಗೆ ಸುಪ್ರೀಂ ಕೋರ್ಟ್ ಇಂದು ತನ್ನ ಆದೇಶ ಪ್ರಕಟಿಸಿದ್ದು, ಪೀಠದ ಇಬ್ಬರು ನ್ಯಾಯಮೂರ್ತಿಗಳು ಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ ಪ್ರಕರಣದ ಮುಂದಿನ ಹಾದಿ ಮತ್ತಷ್ಟು ಕುತೂಹಲ ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ತೀರ್ಪಿನ ವೇಳೆ ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಸಂಬಂಧದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ದತ್ತಾ, ‘ನ್ಯಾಯಾಂಗವು ಕಾರ್ಯಾಂಗದಿಂದ ಸಂಪೂರ್ಣ ಸ್ವತಂತ್ರವಾಗಿರಬೇಕು ಮತ್ತು ಸ್ವಯಂ ಸಮರ್ಥವಾಗಿರಬೇಕು ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿತ್ತು; ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಆ ಆಶಯ ಕುರುಡಾಗಿದ್ದು, ಗಂಭೀರ ಅಪಾಯದಲ್ಲಿದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ‘ನ್ಯಾಯಾಧೀಶರ ನೇಮಕಾತಿಯಲ್ಲಿ ನ್ಯಾಯಾಂಗವು ಕಾರ್ಯಾಂಗದ ಮುಂದೆ ‘ಎರಡನೇ ದರ್ಜೆಯ’ (Second fiddle) ಪಾತ್ರಕ್ಕೆ ತಳ್ಳಲ್ಪಟ್ಟಿರುವಾಗ, ಆಯ್ಕೆ ಪ್ರಕ್ರಿಯೆಯಲ್ಲಿ ಹೊರಗಿನವರನ್ನು ಸೇರಿಸಿಕೊಳ್ಳಬೇಕು ಎಂಬ ಕೂಗು ಏಕೆ’ ಎಂದು ಅವರು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಕಾರ್ಯಾಂಗ (ಕೇಂದ್ರ ಸರ್ಕಾರ) ತನಗೆ ಬೇಕಾದಂತೆ ಆಯ್ದುಕೊಂಡು ಜಾರಿಗೊಳಿಸುತ್ತಿರುವ ಬಗ್ಗೆಯೂ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸರ್ಕಾರವು ಕೊಲಿಜಿಯಂನ ಬಹುತೇಕ ಶಿಫಾರಸುಗಳನ್ನು ಒಪ್ಪಿಕೊಂಡರೂ, ಕನಿಷ್ಠ ಒಂದನ್ನಾದರೂ ತಡೆಹಿಡಿಯುತ್ತದೆ. ಕಾರ್ಯಾಂಗದೊಂದಿಗೆ ನೇರ ಸಂಘರ್ಷವನ್ನು ತಪ್ಪಿಸಲು ಮತ್ತು ಸಂಸ್ಥೆಯ ಕಾರ್ಯನಿರ್ವಹಣೆಯನ್ನು ಮುಂದುವರಿಸಲು ಕೊಲಿಜಿಯಂ ಕೂಡ ಅನಿವಾರ್ಯವಾಗಿ ಮುನ್ನಡೆಯುತ್ತದೆ. ಇದರಿಂದ ಸದ್ಯಕ್ಕೆ ಸಾಂವಿಧಾನಿಕ ಬಿಕ್ಕಟ್ಟು ತಪ್ಪಿರಬಹುದು; ಆದರೆ ಇದನ್ನೇ ‘ಒಪ್ಪಿತ ಪದ್ಧತಿ’ಯನ್ನಾಗಿ ಮುಂದುವರಿಸಲು ಬಿಟ್ಟರೆ ಎಷ್ಟು ಕಾಲ ಈ ಪರಿಸ್ಥಿತಿ ಸಾಗಬಲ್ಲದು?’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

Advertisements

ಹೊಸ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಸರ್ಕಾರವು ‘ಕೊಲಿಜಿಯಂ ವ್ಯವಸ್ಥೆಯಲ್ಲಿ ಹೊರಗಿನವರಿಲ್ಲ’ ಎಂಬ ವಾದವನ್ನು ಮುಂದಿಟ್ಟಿರುವುದು ತನ್ನದೇ ವೈಫಲ್ಯಗಳನ್ನು ಮರೆಮಾಚುವ ‘ಕುತಂತ್ರ ಹಾಗೂ ನುಣುಚಿಕೊಳ್ಳುವ ಪ್ರಯತ್ನ’ ಎಂದು ನ್ಯಾಯಮೂರ್ತಿ ದತ್ತಾ ಟೀಕಿಸಿದ್ದಾರೆ. ಇದೇ ವೇಳೆ, ಭವಿಷ್ಯದಲ್ಲಿ ವ್ಯವಸ್ಥೆಯ ಬಗ್ಗೆ ಯಾವುದೇ ಟೀಕೆಗಳಿಗೆ ಆಸ್ಪದ ನೀಡದಂತೆ ಹಾಲಿ ಮುಖ್ಯ ನ್ಯಾಯಮೂರ್ತಿಗಳ ಸಮರ್ಥ ನಾಯಕತ್ವದ ಅಡಿಯಿರುವ ಕೊಲಿಜಿಯಂ ಅತ್ಯಂತ ವಿವೇಚನಾಯುಕ್ತ ಮತ್ತು ಸೂಕ್ತ ಆಯ್ಕೆಗಳನ್ನು ಮಾಡಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮಹಿಳಾ ಮೀಸಲಾತಿ’ಗಾಗಿ ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ಸಾಧ್ಯತೆ?

ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ,...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಬೀದರ್‌ |ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂಗೆ ಮನವಿ

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ...