ಬಂಗಾಳದಲ್ಲಿ ಚುನಾವಣಾ ಹೈಡ್ರಾಮಾ: ಸ್ಟ್ರಾಂಗ್ ರೂಮ್‌ನಲ್ಲಿ ನಡುರಾತ್ರಿ ನಡೆದಿದ್ದೇನು?

Date:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಜೊತೆಗೆ ರಾಜಕೀಯ ಹೈಡ್ರಾಮ ನಡೆಯುತ್ತಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆಗೂ ಮುನ್ನವೇ ಮತಗಳ ಸುರಕ್ಷತೆಯ ಕುರಿತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಗಂಭೀರ ಆರೋಪಗಳನ್ನು ಮಾಡಿದೆ. ಚುನಾವಣಾ ಆಯೋಗ ಮತ್ತು ಬಿಜೆಪಿ ಶಾಮೀಲಾಗಿ “ಚುನಾವಣಾ ವಂಚನೆ” ಮಾಡುತ್ತಿವೆ ಎಂಬ ಟಿಎಂಸಿಯ ಈ ಆರೋಪ, ಬಂಗಾಳದ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸುವಂತೆ ಮಾಡಿದೆ.

- Advertisement -

ವಿವಾದಕ್ಕೆ ಪ್ರಮುಖ ಕಾರಣವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಸಿಸಿಟಿವಿ ದೃಶ್ಯಾವಳಿ. ಈ ವೀಡಿಯೊದಲ್ಲಿ ಮತಪತ್ರಗಳಿರುವ ಕೋಣೆ ಅದನ್ನ ಸ್ಟ್ರಾಂಗ್‌ ರೂಮ್‌ ಅಂತ ಕರೆಯಲಾಗುತ್ತೆ. ಈ ಕೋಣೆಯ ಒಳಗೆ ಕೆಲವು ವ್ಯಕ್ತಿಗಳು ಅಧಿಕೃತ ನಿಯಮಗಳನ್ನು ಗಾಳಿಗೆ ತೂರಿ ಬ್ಯಾಲೆಟ್ ಯುನಿಟ್‌ಗಳನ್ನು ತೆರೆಯುತ್ತಿರುವುದು ಕಂಡುಬಂದಿದೆ ಎಂದು ಟಿಎಂಸಿ ಪ್ರತಿಪಾದಿಸಿದೆ. ಪಕ್ಷದ ಮುಖಂಡರಾದ ಶಶಿ ಪಂಜಾ ಮತ್ತು ಕುನಾಲ್ ಘೋಷ್ ಈ ದೃಶ್ಯಗಳನ್ನು ಹಂಚಿಕೊಳ್ಳುವ ಮೂಲಕ, “ಇದು ಪ್ರಜಾಪ್ರಭುತ್ವದ ಹಗಲು ದರೋಡೆ” ಎಂದು ಬಣ್ಣಿಸಿದ್ದಾರೆ. ಯಾವುದೇ ಪಕ್ಷದ ಏಜೆಂಟರ ಉಪಸ್ಥಿತಿಯಿಲ್ಲದೆ ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ಚುನಾವಣಾ ಪಾರದರ್ಶಕತೆಯ ಬಗ್ಗೆ ಅನುಮಾನ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ಬಂಗಾಳ ಚುನಾವಣೆ | ಪಶ್ಚಿಮ ರಾಜ್ಯದಲ್ಲಿ ಕಾಂಗ್ರೆಸ್‌ನ 50 ವರ್ಷಗಳ ವನವಾಸ!

ಚುನಾವಣಾ ಆಯೋಗ ಮಾತ್ರ ಟಿಎಂಸಿ ನಾಯಕರ ಈ ಆರೋಪವನ್ನು ತಳ್ಳಿಹಾಕಿದೆ. ಸ್ಟ್ರಾಂಗ್ ರೂಮ್‌ಗಳು ಸಂಪೂರ್ಣ ಸುರಕ್ಷಿತವಾಗಿವೆ ಮತ್ತು ಎಲ್ಲಾ ಇವಿಎಂಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿಕೊಂಡಿದೆ. ಇನ್ನು ವಿಡಿಯೋದಲ್ಲಿ ಕಂಡುಬರುವ ಚಟುವಟಿಕೆಯು ಇವಿಎಂ ಸ್ಟ್ರಾಂಗ್ ರೂಮ್‌ನದ್ದಲ್ಲ. ಇದು ಪೋಸ್ಟಲ್ ಬ್ಯಾಲೆಟ್‌ಗಳನ್ನು ನಿಯಮಾನುಸಾರ ವರ್ಗೀಕರಿಸುವ ಪ್ರಕ್ರಿಯೆಯದ್ದು. ಸ್ಟ್ರಾಂಗ್ ರೂಮ್‌ಗಳ ಹೊರಗಿನ ಕಾರಿಡಾರ್‌ನಲ್ಲಿ ನಡೆದಿದೆ ಎಂದೂ ಹೇಳಿಕೊಂಡಿದೆ.

ಇನ್ನು “ಸೋಲಿನ ಭೀತಿಯಿಂ ಟಿಎಂಸಿ ನಾಟಕ ಮಾಡುತ್ತಿದೆ” ಎಂದು ಹೇಳುವ ಮೂಲಕ ಎಂದಿನಂತೆ ಬಿಜೆಪಿ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದೆ. “ಟಿಎಂಸಿ ಅಭ್ಯರ್ಥಿಗಳು ತಮ್ಮ ಸೋಲು ನಿಶ್ಚಿತ ಎಂದು ಈಗಾಗಲೇ ತಿಳಿದಿದ್ದಾರೆ. ಆದ್ದರಿಂದ ಇವಿಎಂ ಮತ್ತು ಸ್ಟ್ರಾಂಗ್ ರೂಮ್‌ಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ” ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಮತ್ತು ಇತರ ನಾಯಕರು ಹೇಳಿದ್ದಾರೆ. ಇನ್ನು ಟಿಎಂಸಿ ನಾಯಕರು ಅನಗತ್ಯವಾಗಿ ವದಂತಿಗಳನ್ನು ಹರಡುತ್ತಿದ್ದಾರೆ ಮತ್ತು ಮತ ಎಣಿಕೆಗೆ ಮುನ್ನ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ತಾಪಸ್ ರಾಯ್ ಆರೋಪಿಸಿದ್ದಾರೆ.

ಸಾಮಾನ್ಯವಾಗಿ ಒಮ್ಮೆ ಸ್ಟ್ರಾಂಗ್‌ ರೂಮ್ ಅನ್ನು ಸೀಲ್ ಮಾಡಿದ ಮೇಲೆ ಮತ ಎಣಿಕೆ ಪ್ರಕ್ರಿಯೆಗಾಗಿ ನಿಗದಿಪಡಿಸಿದ ದಿನಾಂಕದಂದು ಸ್ಟ್ರಾಂಗ್‌ ರೂಮ್ ತೆರೆಯಬಹುದು. ಅಧಿಕೃತ ಸೂಚನೆ ಇಲ್ಲದೆ ಸ್ಟ್ರಾಂಗ್‌ ರೂಮ್‌ ತೆರೆಯುವಂತಿಲ್ಲ. ಅದೂ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳು ಅಥವಾ ಅವರ ಅಧಿಕೃತ ಪ್ರತಿನಿಧಿಗಳ ಸಮ್ಮುಖದಲ್ಲಿ ಮಾತ್ರ ಸ್ಟ್ರಾಂಗ್‌ ರೂಮ್‌ ತೆರೆಯಲು ಅವಕಾಶವಿದೆ. ಹಾಗಿದ್ದಾಗ ಯಾರ ಉಪಸ್ಥಿತಿಯೂ ಇಲ್ಲದೆ ಸ್ಟ್ರಾಂಗ್‌ ರೂಮ್‌ ತೆರೆದಿರುವುದು ಯಾಕೆ ಎಂಬ ಪ್ರಶ್ನೆಯನ್ನು ಟಿಎಂಸಿ ಎತ್ತಿದೆ.

“ಮೊದಲು ಅವರು ಇವಿಎಂ ಯಂತ್ರಗಳನ್ನು ಸೀಲ್ ಮಾಡಿದರು. ಅವರು ಸ್ಟ್ರಾಂಗ್ ರೂಮ್ ಅನ್ನು ಸೀಲ್ ಮಾಡಿದರು. ಆದರೆ ನಂತರ ಮತಪತ್ರಗಳನ್ನು ಹೊರತೆಗೆದು ಮತಗಳನ್ನು ಎಣಿಸಲು ಪ್ರಾರಂಭಿಸಿದರು. ಈ ರೀತಿ ಎಲ್ಲಿ ನಡೆಯುತ್ತದೆ? ನಾವು ಆಕ್ಷೇಪಿಸಿದರೆ ಬಿಜೆಪಿ ಕಾರ್ಯಕರ್ತರು ಗದ್ದಲ ಸೃಷ್ಟಿಸುತ್ತಾರೆ” ಎಂದು ಟಿಎಂಸಿ ದೂರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...