1961ರ ಚುನಾವಣಾ ನಿಯಮಗಳಿಗೆ ಮಾಡಿದ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ಕೋರಿದೆ.
ರಮೇಶ್ ಪರ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರ ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 17ರಿಂದ ಪ್ರಾರಂಭವಾಗುವ ವಾರದಲ್ಲಿ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಪೀಠ ಹೇಳಿದೆ.
ಇದನ್ನು ಓದಿದ್ದೀರಾ? ಅಭ್ಯರ್ಥಿಗಳಿಗೆ ಮತಗಟ್ಟೆ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲ: ಚುನಾವಣಾ ಆಯೋಗ
1961ರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ನಿಯಮಗಳಿಗೆ ‘ಬಹಳ ಚಾತುರ್ಯದಿಂದ’ ತಿದ್ದುಪಡಿ ಮಾಡಲಾಗಿದೆ. ಸಿಸಿಟಿವಿ ಅಳವಡಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ.
ಮತದಾನದ ಆಯ್ಕೆಗಳನ್ನು ಎಂದಿಗೂ ಬಹಿರಂಗಪಡಿಸಲಾಗುವುದಿಲ್ಲ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.
ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ | ಆರೋಪಿ, ಅಪರಾಧಿಗಳೇ ಇಲ್ಲದ ಹಗರಣವೇ?
ಮುಂದಿನ ವಿಚಾರಣೆಗೂ ಮುನ್ನ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಕೇಂದ್ರವು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಒತ್ತಾಯಿಸಿದೆ. ಅದಕ್ಕೂ ಮುನ್ನ ಪ್ರತಿಕ್ರಿಯೆ ಸಲ್ಲಿಸಲಾಗದಿದ್ದರೆ ವಿಚಾರಣೆ ದಿನವಾದರೂ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
1961ರ ನಿಯಮಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕರು ಡಿಸೆಂಬರ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದರು. ಚುನಾವಣೆಯಲ್ಲಿ ದುರುಪಯೋಗ ತಡೆಗಟ್ಟಲು ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೊದಲಾದವುಗಳನ್ನು ಅಳವಡಿಸಲಾಗುತ್ತದೆ. ಆದರೆ ಸರ್ಕಾರ ಇದಕ್ಕೆ ಧಕ್ಕೆ ಉಂಟು ಮಾಡಲು ಚುನಾವಣಾ ನಿಯಮವನ್ನು ಬದಲಾಯಿಸಿದೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.
