ಚುನಾವಣಾ ನಿಯಮಗಳಿಗೆ ತಿದ್ದುಪಡಿ | ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

Date:

1961ರ ಚುನಾವಣಾ ನಿಯಮಗಳಿಗೆ ಮಾಡಿದ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ಕೋರಿದೆ.

- Advertisement -

ರಮೇಶ್ ಪರ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರ ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 17ರಿಂದ ಪ್ರಾರಂಭವಾಗುವ ವಾರದಲ್ಲಿ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಅಭ್ಯರ್ಥಿಗಳಿಗೆ ಮತಗಟ್ಟೆ ಸಿಸಿಟಿವಿ ದೃಶ್ಯಾವಳಿ ಲಭ್ಯವಿಲ್ಲ: ಚುನಾವಣಾ ಆಯೋಗ

1961ರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದಾರೆ. ನಿಯಮಗಳಿಗೆ ‘ಬಹಳ ಚಾತುರ್ಯದಿಂದ’ ತಿದ್ದುಪಡಿ ಮಾಡಲಾಗಿದೆ. ಸಿಸಿಟಿವಿ ಅಳವಡಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಮತದಾನದ ಆಯ್ಕೆಗಳನ್ನು ಎಂದಿಗೂ ಬಹಿರಂಗಪಡಿಸಲಾಗುವುದಿಲ್ಲ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್ | ಆರೋಪಿ, ಅಪರಾಧಿಗಳೇ ಇಲ್ಲದ ಹಗರಣವೇ?

ಮುಂದಿನ ವಿಚಾರಣೆಗೂ ಮುನ್ನ ಭಾರತೀಯ ಚುನಾವಣಾ ಆಯೋಗ (ಇಸಿಐ) ಮತ್ತು ಕೇಂದ್ರವು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಒತ್ತಾಯಿಸಿದೆ. ಅದಕ್ಕೂ ಮುನ್ನ ಪ್ರತಿಕ್ರಿಯೆ ಸಲ್ಲಿಸಲಾಗದಿದ್ದರೆ ವಿಚಾರಣೆ ದಿನವಾದರೂ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

1961ರ ನಿಯಮಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕರು ಡಿಸೆಂಬರ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದರು. ಚುನಾವಣೆಯಲ್ಲಿ ದುರುಪಯೋಗ ತಡೆಗಟ್ಟಲು ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಮೊದಲಾದವುಗಳನ್ನು ಅಳವಡಿಸಲಾಗುತ್ತದೆ. ಆದರೆ ಸರ್ಕಾರ ಇದಕ್ಕೆ ಧಕ್ಕೆ ಉಂಟು ಮಾಡಲು ಚುನಾವಣಾ ನಿಯಮವನ್ನು ಬದಲಾಯಿಸಿದೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...