ರಾಜ್ಯದ 4 ಸ್ಥಾನ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ಕ್ಕೆ ಚುನಾವಣೆ

Date:

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟ ಎರಡೂ ಸಹ ಮೇಲ್ಮನೆಯಲ್ಲಿ ತಮ್ಮ ಬಲವನ್ನು ಕೊಂಚ ಮಟ್ಟಿಗೆ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹಾಗೂ ಕೇಂದ್ರ ಸಚಿವರಾದ ಜಾರ್ಜ್ ಕುರಿಯನ್ ಮತ್ತು ರವನೀತ್ ಸಿಂಗ್ ಬಿಟ್ಟು ಅವರು ಮುಂದಿನ ತಿಂಗಳು ನಿವೃತ್ತರಾಗುತ್ತಿರುವ ಪ್ರಮುಖ ಸಂಸದರಾಗಿದ್ದಾರೆ.

- Advertisement -

ದೇಶದ ಹತ್ತು ರಾಜ್ಯಗಳಲ್ಲಿ ನಡೆಯಲಿರುವ ಈ ಚುನಾವಣೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಗುಜರಾತ್‌ನಿಂದ ತಲಾ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶ (ತಲಾ 3), ಜಾರ್ಖಂಡ್ (2), ಹಾಗೂ ಮೇಘಾಲಯ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಶಾಸಕರು ಪಕ್ಷದ ಆಧಾರದ ಮೇಲೆ ಮತದಾನ ಮಾಡಿದರೆ, ಎನ್‌ಡಿಎ ಬಲವು 15ರಿಂದ 17ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಹಾಗೆಯೇ ವಿಪಕ್ಷಗಳ ಬಲವು 5ರಿಂದ 7ಕ್ಕೆ ಹೆಚ್ಚಾಗಬಹುದು. ಆದರೆ, ವೈಎಸ್‌ಆರ್ ಕಾಂಗ್ರೆಸ್ ತನ್ನ ಎಲ್ಲ ಮೂರು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಜಾಮೀನು ಪಡೆದ ಅತ್ಯಾಚಾರ ಆರೋಪಿಗೆ ಅದ್ದೂರಿ ಸ್ವಾಗತ: ಎಫ್‌ಐಆರ್ ದಾಖಲು

ಉಳಿದಂತೆ ಜಾರ್ಖಂಡ್‌ನ ಎರಡು ಸ್ಥಾನಗಳು ಹಾಗೂ ಈಶಾನ್ಯ ರಾಜ್ಯಗಳಾದ ಮಣಿಪುರ, ಅರುಣಾಚಲ ಪ್ರದೇಶ, ಮೇಘಾಲಯ ಹಾಗೂ ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ಜೂನ್ 18ರಂದು ಮತದಾನ ನಡೆಯಲಿದೆ. ಈ ರಾಜ್ಯಗಳ ವಿಧಾನಸಭೆಯ ಸಂಖ್ಯಾಬಲವು ಆಯಾ ಆಡಳಿತಾರೂಢ ಪಕ್ಷಗಳು ಅಥವಾ ಮೈತ್ರಿಕೂಟಗಳ ಅಭ್ಯರ್ಥಿಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದು, ಮೇಲ್ಮನೆಯಲ್ಲಿನ ಪಕ್ಷಗಳ ಒಟ್ಟು ಸಂಖ್ಯಾಬಲದ ಮೇಲೆ ಮಹತ್ವದ ಪರಿಣಾಮ ಬೀರಲಿವೆ.

ಕರ್ನಾಟಕದಲ್ಲಿ ನಾಲ್ಕು ರಾಜ್ಯಸಭಾ ಸಂಸದರು ನಿವೃತ್ತರಾಗುತ್ತಿದ್ದಾರೆ. ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಎಚ್.ಡಿ. ದೇವೇಗೌಡ , ಬಿಜೆಪಿಯಿಂದ ನಾರಾಯಣ ಕೊರಗಪ್ಪ ಮತ್ತು ಈರಣ್ಣ ಕಡಾಡಿ ನಿವೃತ್ತರಾಗುತ್ತಿರುವ ನಾಯಕರಾಗಿದ್ದಾರೆ. ಸದ್ಯದ ವಿಧಾನಸಭೆಯ ಅಂಕಿ-ಅಂಶಗಳು ಹಾಗೂ ಶಾಸಕರ ಬಲವನ್ನು ಗಮನಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 3 ಸ್ಥಾನಗಳನ್ನು ಮತ್ತು ಬಿಜೆಪಿ 1 ಸ್ಥಾನವನ್ನು ಗೆಲ್ಲಬಹುದು. ಚುನಾವಣೆ ಜೂ.18ರಂದು ನಡೆದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು...