ಲಾರಿ ಅಪಘಾತದಲ್ಲಿ ತನ್ನ ಹಿಂಡು ಕಳೆದುಕೊಂಡಿದ್ದ ದುಃಖಿತ ಆನೆ; ಮೂರು ವರ್ಷಗಳ ಬಳಿಕ ಸೆರೆ

Date:

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ಅರಣ್ಯ ವಲಯದಲ್ಲಿ ಮೂರು ವರ್ಷಗಳಿಂದ ವಾಹನಗಳ ಬೆನ್ನಟ್ಟಿ, ಬೆಳೆ ಹಾನಿ ಮಾಡುತ್ತಾ ಸ್ಥಳೀಯ ಜನರಲ್ಲಿ ಭೀತಿ ಮೂಡಿಸಿದ್ದ ಒಂಟಿ ಆನೆಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಲಾರಿ ಅಪಘಾತದಲ್ಲಿ ತನ್ನ ಇಡೀ ಹಿಂಡನ್ನು ಕಳೆದುಕೊಂಡು ತೀವ್ರ ಶೋಕದಲ್ಲಿದ್ದ ಈ ಆನೆಯನ್ನು ಇದೀಗ ಸುರಕ್ಷಿತವಾಗಿ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

- Advertisement -

ಸೆರೆಹಿಡಿಯಲಾದ ಆನೆಯು ನಾಲ್ಕು ಆನೆಗಳಿದ್ದ ಹಿಂಡಿನ ಭಾಗವಾಗಿತ್ತು. ಆದರೆ, 2023ರ ಜೂನ್ 14ರಂದು ತಡರಾತ್ರಿ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ (NH-4) ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಡಿನಲ್ಲಿದ್ದ ಮೂರು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ಈ ಭೀಕರ ಅಪಘಾತದಲ್ಲಿ ಈ ಗಂಡಾನೆ ಮಾತ್ರ ಪಾರಾಗಿತ್ತು. ತನ್ನ ಸಹ ಆನೆಗಳನ್ನು ಕಳೆದುಕೊಂಡ ದುಃಖದಲ್ಲಿದ್ದ ಆನೆಯ ವರ್ತನೆ ಅಂದಿನಿಂದ‌ ಸಂಪೂರ್ಣ ಬದಲಾಗಿತ್ತು. ಆನೆಗಳು ಸಾವನ್ನಪ್ಪಿದ ಅದೇ ಜಾಗಕ್ಕೆ ಪದೇ ಪದೇ ಬರುತ್ತಿದ್ದ ಆನೆ, ಆ ಮಾರ್ಗವಾಗಿ ಚಲಿಸುವ ವಾಹನಗಳನ್ನು ಬೆನ್ನಟ್ಟುತ್ತಿತ್ತು. ಆನೆಯ ವರ್ತನೆ‌ದಿನ ಕಳೆದಂತೆ ಅಪಾಯಕಾರಿಯಾಗುತ್ತಾ ಹೋಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದರಿಂದ, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯ ಜನರಿಗೆ ಮಾತ್ರವಲ್ಲದೆ ಸ್ವತಃ ಆನೆಗೂ ಪ್ರಾಣಾಪಾಯವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಸುತ್ತಮುತ್ತಲಿನ ಹಳ್ಳಿಗಳ ಮೇಲೆ ದಾಳಿ ನಡೆಸಿ ಬೆಳೆಗಳನ್ನು ನಾಶಪಡಿಸುವುದು ಮತ್ತು ಜಾನುವಾರುಗಳ ಮೇಲೆ ಹಲ್ಲೆ ನಡೆಸುವ ಮೂಲಕ ಗ್ರಾಮಸ್ಥರಲ್ಲಿ ಇದು ತೀವ್ರ ಆತಂಕ ಸೃಷ್ಟಿಸಿತ್ತು.

ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆಹಿಡಿಯಲಾದ ಆನೆಯನ್ನು ಸದ್ಯ ಮುಸಲಿಮಡುಗು ಆನೆ ಶಿಬಿರಕ್ಕೆ ರವಾನಿಸಲಾಗಿದೆ. ಅಲ್ಲಿ ನುರಿತ ಪಶುವೈದ್ಯರ ಕಣ್ಗಾವಲಿನಲ್ಲಿ ಆನೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅದರ ವರ್ತನೆಯನ್ನು ಸೂಕ್ಷ್ಮವಾಗಿ ಗಮನಿಸಿ, ಆನೆಯನ್ನು ಮಾನಸಿಕ ಆಘಾತದಿಂದ ಹೊರತರಲು ತಜ್ಞರು ಮೌಲ್ಯಮಾಪನ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...