ಮಧ್ಯಪ್ರದೇಶ | ಬಾವಿಗೆ ಉರುಳಿದ ವ್ಯಾನ್; 11 ಮಂದಿ ದಾರುಣ ಸಾವು

Date:

ವೇಗವಾಗಿ ಬಂದ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ನೀರು ತುಂಬಿದ ಬಾವಿಗೆ ಉರುಳಿ ಸುಮಾರು 11 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಾರಾಯಣಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

- Advertisement -

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ರತ್ಲಂ ವಲಯದ ಉಪ ಮಹಾನಿರ್ದೇಶಕ (ಡಿಐಜಿ) ಮನೋಜ್ ಸಿಂಗ್, “ವ್ಯಾನ್‌ನಲ್ಲಿ 13 ಜನರು ಪ್ರಯಾಣಿಸುತ್ತಿದ್ದರು ಅವರಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇತರ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಭೀಕರ ಅಪಘಾತ; ಮಗು ಸೇರಿ 9 ಮಂದಿ ದಾರುಣ ಸಾವು

“ರಕ್ಷಣೆಗಾಗಿ ಬಾವಿಗೆ ಇಳಿದ ಮನೋಹರ್ ಎಂದು ಗುರುತಿಸಲಾದ ಗ್ರಾಮಸ್ಥರು ಸಹ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಲಿಯಾದ ವ್ಯಕ್ತಿಯ ಶವವನ್ನು ಇನ್ನೂ ಬಾವಿಯಿಂದ ಹೊರತೆಗೆಯಲಾಗಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಬಾವಿಗೆ ಉರುಳಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಕೂಡಾ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ಘಟಕಗಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸ್ಥಳಕ್ಕೆ ಧಾವಿಸಿದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ, ಚಾಲಕನ ನಿಯಂತ್ರಣ ತಪ್ಪಿ ವಾಹನ ಬಾವಿಗೆ ಉರುಳಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...