ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್‌; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ

Date:

ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ದೋಡಾ ಜಿಲ್ಲೆಯಲ್ಲಿ ಭದೇರ್ವಾ-ಪಠಾಣ್‌ಕೋಟ್ ರಸ್ತೆಯ ಚಟರ್‌ಗಲ್ಲದ ಮೇಲ್ಭಾಗದಲ್ಲಿರುವ ಜಂಟಿ ಚೆಕ್‌ಪೋಸ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು ರಾಷ್ಟ್ರೀಯ ರೈಫಲ್ಸ್‌ನ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಮತ್ತೊಂದೆಡೆ, “ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಕಬೀರ್ ದಾಸ್ ತೀವ್ರವಾಗಿ ಗಾಯಗೊಂಡಿದ್ದರು, ಯೋಧನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ರಿಯಾಸಿ ಉಗ್ರ ದಾಳಿ| ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ 

ಇನ್ನು ಗ್ರಾಮದಲ್ಲಿ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಮಂಗಳವಾರ ಸಂಜೆ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಗ್ರಾಮದ ಮೇಲೆ ಉಗ್ರರು ದಾಳಿ ನಡೆಸಿದ್ದು ಇದರಿಂದ ಓರ್ವ ನಾಗರಿಕ ಗಾಯಗೊಂಡಿದ್ದಾರೆ. ನಂತರ ನಡೆದ ಶೋಧ ಕಾರ್ಯಾಚರಣೆಯಲ್ಲಿ ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈತ ಗಡಿಯಿಂದ ಈಚೆ ಬಂದಿದ್ದಾನೆ ಎಂದು ಹೇಳಲಾಗಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಎನ್‌ಕೌಂಟರ್ ನಡೆದ ಸ್ಥಳದಲ್ಲಿದ್ದಾರೆ. ಪ್ರದೇಶವನ್ನು ಸುತ್ತುವರಿದಿದ್ದು, ಸಿಆರ್‌ಪಿಎಫ್ ನೆರವಿನೊಂದಿಗೆ ಮನೆ-ಮನೆಗೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವ ಖೋರಿ ದೇವಸ್ಥಾನದಿಂದ ಕತ್ರಾಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ನ ಮೇಲೆ ಭಯೋತ್ಪಾದಕರು ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಉಗ್ರರ ಗುಂಡಿನ ದಾಳಿಯಿಂದಾಗಿ ಬಸ್ ಕಮರಿಗೆ ಉರುಳಿದ್ದು ಒಂಬತ್ತು ಜನರು ಸಾವನ್ನಪ್ಪಿದರೆ 41 ಮಂದಿ ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...