ಜಮ್ಮು ಕಾಶ್ಮೀರದ ಲೋಕಸಭಾ ಸದಸ್ಯ ಇಂಜಿನಿಯರ್ ಶೇಖ್ ಅಬ್ದುಲ್ ರಶೀದ್‌ಗೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಜುಲೈ 5 ರಂದು ಎರಡು ಗಂಟೆಗಳ ಕಾಲ ಪೆರೋಲ್ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿದೆ.
ರಾಷ್ಟ್ರೀಯ ತನಿಖಾ ಮಂಡಳಿ(ಎನ್‌ಐಎ) ದೆಹಲಿ ತಿಹಾರ್ ಜೈಲಿನಲ್ಲಿರುವ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿತ್ತು. ರಶೀದ್ ಅವರು ಜಮ್ಮು ಕಾಶ್ಮೀರದ ಬಾರಮುಲ್ಲ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ವಿಪಕ್ಷಗಳು ಒಟ್ಟಾಗಿ ಕಣಕ್ಕೆ: ಶರದ್ ಪವಾರ್
ಜಮ್ಮು ಕಾಶ್ಮೀರದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ರಶೀದ್ ಅವರನ್ನು 2016ರಲ್ಲಿ ಬಂಧಿಸಲಾಗಿತ್ತು.
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಶೀದ್ ಅವರು 2 ಲಕ್ಷಗಳಿಗೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದರು.
