ವಕ್ಫ್‌ ಮಸೂದೆ ವಿರುದ್ಧ ಮತ ಚಲಾಯಿಸಲಿರುವ ‘ಇಂಡಿಯಾ ಒಕ್ಕೂಟ’

Date:

Advertisements

ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಪೂರ್ಣ ಚರ್ಚೆ ನಡೆಸಲು ವಿಪಕ್ಷಗಳ ‘ಇಂಡಿಯಾ ಒಕ್ಕೂಟ’ ಸರ್ವಾನುಮತದಿಂದ ನಿರ್ಧರಿಸಿದ್ದು, ಸಂಸತ್ತಿನಲ್ಲಿ ಅದರ ವಿರುದ್ಧ ಮತ ಚಲಾಯಿಸಲಿವೆ. ನಿನ್ನೆ(ಏ.01) ಸಂಜೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಎಲ್ಲ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

‘ನಾವು ಮಸೂದೆಯ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ಧರಿಸಿದ್ದೇವೆ. ಮಸೂದೆಯನ್ನು ಅಂಗೀಕರಿಸಲು ನಮ್ಮ ಬಲವಾದ ವಿರೋಧ ಇದೆ’ ಎಂದು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ತಿಳಿಸಿದ್ದಾರೆ. ವಿರೋಧ ಪಕ್ಷವು ಮಸೂದೆಯನ್ನು ಪ್ರತಿ ಹಂತದಲ್ಲೂ ವಿರೋಧಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂಡಿಯಾ ಮೈತ್ರಿಕೂಟದ ಜೊತೆಗೆ, ಸಮಾನ ಮನಸ್ಕ ಪಕ್ಷಗಳಿಗೂ ನಾವು ವಿನಂತಿಸುತ್ತಿದ್ದೇವೆ, ಏಕೆಂದರೆ ಇದು ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.

Advertisements

ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಆಡಳಿತವನ್ನು ಸುಧಾರಿಸುವ ವಿವಾದಾತ್ಮಕ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ತೆಗೆದುಕೊಳ್ಳಲಾಗುವುದು. ಚರ್ಚೆಗೆ ಸುಮಾರು ಎಂಟು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಆದರೆ ಪ್ರತಿಪಕ್ಷಗಳು 10 ಗಂಟೆಗಳ ಕಾಲಾವಕಾಶ ಕೇಳಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕೋದ್ಯಮದ ಪಾವಿತ್ರ್ಯವನ್ನು ಪಾತಾಳಕ್ಕಿಳಿಸಿದ ‘ಪತ್ರಕರ್ತರು’!

ಪ್ರಸ್ತಾವಿತ ಮಸೂದೆಯನ್ನು ಅಸಂವಿಧಾನಿಕ ಎಂದು ವಿರೋಧ ಪಕ್ಷ ಖಂಡಿಸಿದೆ. ಕಳೆದ ವರ್ಷ ಮಸೂದೆಯನ್ನು ಮಂಡಿಸುವಾಗ, ಸರ್ಕಾರವು ಅದನ್ನು ಉಭಯ ಸದನಗಳ ಜಂಟಿ ಸಮಿತಿಗೆ ಉಲ್ಲೇಖಿಸುವ ಪ್ರಸ್ತಾಪವನ್ನು ಮಾಡಿತ್ತು. ಅದರ ವರದಿ ಬಂದ ನಂತರ, ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸಂಪುಟವು ಕೆಲವು ಬದಲಾವಣೆಗಳನ್ನು ಅನುಮೋದಿಸಿತ್ತು.

ಸದನದಲ್ಲಿ ಉಪಸ್ಥಿತರಿರುವಂತೆ ಸಂಸದರಿಗೆ ಬಿಜೆಪಿ, ಕಾಂಗ್ರೆಸ್ ವಿಪ್‌ ಜಾರಿ

ಲೋಕಸಭೆಯಲ್ಲಿಇಂದು (ಬುಧವಾರ) ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯಾಗಲಿರುವುದರಿಂದ ಕಲಾಪದ ವೇಳೆ ತನ್ನ ಎಲ್ಲ ಸಂಸದರು ಸದನದಲ್ಲಿ ಹಾಜರಿರಬೇಕೆಂದು ಬಿಜೆಪಿಯು ಮಂಗಳವಾರ ವಿಪ್‌ ಜಾರಿಗೊಳಿಸಿದೆ.

ಕಾಂಗ್ರೆಸ್ ಪಕ್ಷವು ಕೂಡ ಸಂಸತ್ ಅಧಿವೇಶನದ ಮುಂದಿನ ಮೂರು ದಿನಗಳವರೆಗೆ ತನ್ನ ಎಲ್ಲ ಸಂಸದರು ಸದನದಲ್ಲಿ ಉಪಸ್ಥಿತರಿರಬೇಕೆಂದು ವಿಪ್‌ ಆದೇಶ ಹೊರಡಿಸಿದೆ.

ಈ ಹಿಂದೆ ವಿಧೇಯಕಕ್ಕೆ ಸಂಬಂಧಿಸಿ ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಮಂಡಿಸಿದ್ದ ಸಲಹೆಗಳನ್ನು ಜಂಟಿ ಸಂಸದೀಯ ಸಮಿತಿಯು ಅನುಮೋದಿಸಿತ್ತು. ಬುಧವಾರ ಮಂಡನೆಯಾಗಲಿರುವ ಮಸೂದೆಯಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X