ಸ್ಮಶಾನಕ್ಕೆ ಪ್ರವೇಶ ನಿರ್ಬಂಧ; ರಸ್ತೆಯಲ್ಲೇ ನಡೆಯಿತು 91 ವರ್ಷದ ದಲಿತ ಮಹಿಳೆಯ ಅಂತ್ಯಕ್ರಿಯೆ

Date:

ಜಾತಿ ದಬ್ಬಾಳಿಕೆಯ ಆಘಾತಕಾರಿ ಘಟನೆಯೊಂದರಲ್ಲಿ, 19 ವರ್ಷದ ದಲಿತ ಮಹಿಳೆಯೊಬ್ಬರು ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಪ್ರವೇಶ ನಿರ್ಬಂಧಿಸಲಾದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ. ಪ್ರಬಲ ಜಾತಿಗ ಜಾತಿ ತಾರತಮ್ಯದಿಂದ ಬೇಸತ್ತ ಕುಟುಂಬವು ಅಜ್ಜಿಯ ಅಂತ್ಯಕ್ರಿಯೆಯನ್ನು ರಸ್ತೆ ಮಧ್ಯೆಯೇ ನಡೆಸಿದೆ.

- Advertisement -

ಗುರುವಾರ ತಡರಾತ್ರಿ, ವೈಶಾಲಿ ಜಿಲ್ಲೆಯ ಗೊರೌಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಧೋ ಅಂಧಾರಿ ಗಚ್ಚಿ ಚೌಕ್‌ನಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ಸೊಂಧೋ ವಾಸುದೇವ್ ಗ್ರಾಮದ ನಿವಾಸಿ ಝಾಪಿ ದೇವಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕುಟುಂಬಸ್ಥರು ಮತ್ತು ಬಂಧುಗಳು ಮಹಿಳೆಯ ಮೃತದೇಹ ಹೊತ್ತು ಸ್ಮಶಾನದೆಡೆಗೆ ಹೊರಟಿದ್ದರು. ಆದರೆ, ಪ್ರಬಲ ಜಾತಿಯ ಕೆಲವು ಜಾತಿವಾದಿಗಳು ರಸ್ತೆಯನ್ನು ಗಡ್ಡಗಟ್ಟಿ, ಅವರು ಸ್ಮಶಾನಕ್ಕೆ ಹೋಗದಂತೆ ತಡೆದಿದ್ದಾರೆ. ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸದಂತೆ ತಾಕೀತು ಮಾಡಿದ್ದಾರೆ. ಪರಿಣಾಮ, ಅಂತ್ಯಕ್ರಿಯೆಗೆ ಬೇರಾವುದೇ ಸ್ಥಳವಿಲ್ಲದ ಕಾರಣ, ರಸ್ತೆ ನಡುವೆಯೇ ಅಂತ್ಯಕ್ರಿಯೆ ನಡೆಸಲಾಗಿದೆ.

“ಝಾಪಿ ದೇವಿ ಅವರ ಮೃತದೇಹವನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗುವಾಗ, ಕೆಲವರು ದಾರಿಯಲ್ಲಿ ಅಡ್ಡಗಟ್ಟಿದರು. ಮುಂದೆ ಸಾಗಲು ಸಾಧ್ಯವಾಗದಂತೆ ಮಾಡಿದರು. ನಿರಂತರ ಮಾತಕತೆ-ಪ್ರಯತ್ನಗಳು ನಡೆದವು. ಮಾಹಿತಿ ಪಡೆದ ಗೊರೌಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಆದರೂ, ಸ್ಮಶಾನಕ್ಕೆ ಮೃತದೇಹವನ್ನು ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ, ದಾರಿಯಲ್ಲಿಯೇ ಚಿತೆಯನ್ನು ಸಿದ್ದಪಡಿಸಿ, ಅಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕಾಯಿತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಇರಾನ್‌ ಮೇಲೆ ಮರುದಾಳಿಗೆ ಸಜ್ಜಾಗಿದೆ ಅಮೆರಿಕ- ಇಸ್ರೇಲ್ ಯುದ್ಧಕೋರ ಜೋಡಿ

ಸ್ಮಶಾನಕ್ಕೆ ಹೋಗುವ ಮಾರ್ಗವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಲಾಗಿದೆ. ಇದರಿಂದಾಗಿ ಗ್ರಾಮಸ್ಥರಿಗೆ ನಿರಂತರ ತೊಂದರೆ ಉಂಟಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಪದೇ ಪದೇ ದೂರು ನೀಡಿದ್ದರೂ, ಆಡಳಿತವು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದಿರುವ ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವರ್ಷಾ ಸಿಂಗ್, ಘಟನೆಯ ತನಿಖೆಗಾಗಿ ಮಹುವಾ ಉಪವಿಭಾಗಾಧಿಕಾರಿ, ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಗೋರೌಲ್‌ ಪಿಡಿಒ ಒಳಗೊಂಡ ಸಮಿತಿ ರಚಿಸಿದ್ದಾರೆ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...