ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಉಚ್ಚಾಟಿಸಲು ಲೋಕಸಭೆ ನೈತಿಕ ಸಮಿತಿ ಶಿಫಾರಸು; ವರದಿ

Date:

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಜ್ಯಸಭೆ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆ ಸದಸ್ಯತ್ವದಿಂದ ಉಚ್ಚಾಟಿಸುವಂತೆ ಲೋಕಸಭೆ ನೈತಿಕ ಸಮಿತಿಯು ಶಿಫಾರಸು ಮಾಡಿರುವುದಾಗಿ ಅದಾನಿ ಮಾಲೀಕತ್ವದ ‘ಎನ್‌ಡಿಟಿವಿ’ ವರದಿ ಮಾಡಿದೆ.

- Advertisement -

500 ಪುಟಗಳ ಈ ವರದಿಯನ್ನು ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಲಾಗುತ್ತದೆ. ಚರ್ಚೆಯ ಬಳಿಕ ಪೂರಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಮೊಯಿತ್ರಾ ಅವರು ಮತ್ತೆ ಗುರುವಾರ ಸಮಿತಿ ಮುಂದೆ ಹಾಜರಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಲೋಕಸಭೆ ನೈತಿಕ ಸಮಿತಿ ಶಿಫಾರಸು ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಸಂಸದೆ ಮಹುವಾ ಮೊಯಿತ್ರಾ, ಲೋಕಸಭೆಗೆ ಅನೈತಿಕ ಸಮಿತಿಯು ಶಿಫಾರಸು ವರದಿ ಸಲ್ಲಿಸುವ ಮುನ್ನವೇ ಅದಾನಿ ಮಾಲೀಕತ್ವದ ‘ಎನ್‌ಡಿಟಿವಿ’ಗೆ ಈ ವರದಿಯ ಪ್ರತಿ ಸಿಕ್ಕಿರುವುದನ್ನು ನೋಡುವಾಗ ಖುಷಿಯಾಗುತ್ತದೆ. ಮೋದಿ-ಅದಾನಿ ಭಾಯ್-ಭಾಯ್, ಎಲ್ಲ ಸಂಸ್ಥೆಗಳು ಬೈ-ಬೈ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ನಡುವೆ ಅದಾನಿ ಮಾಲೀಕತ್ವದ ಎನ್‌ಡಿಟಿವಿಗೆ ನೈತಿಕ ಸಮಿತಿಯ ಶಿಫಾರಸು ವರದಿಯ ಕರಡು ಪ್ರತಿಯಲ್ಲಿರುವ ಅಂಶಗಳು ಹೇಗೆ ತಿಳಿಯಿತು ಎಂಬುದರ ಬಗ್ಗೆ ಉತ್ತರ ನೀಡುವಂತೆ ಸಂಸದೆ ಮಹುವಾ ಮೊಯಿತ್ರಾ, ಲೋಕಸಭಾ ಸ್ಫೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

‘ಕರಡು ಪತ್ರಿಯಲ್ಲಿನ ಅಂಶಗಳು ಹೇಗೆ ಎನ್‌ಡಿಟಿವಿಗೆ ಸಿಕ್ಕಿತು. ಈ ಬಗ್ಗೆ ಲೋಕಸಭಾ ಸ್ಫೀಕರ್ ಓಂ ಬಿರ್ಲಾ ಅವರಿಂದ ಈವರೆಗೆ ನನಗೆ ಯಾವುದೇ ಉತ್ತರ ಬಂದಿಲ್ಲ ಎಂದು ಕೂಡ ‘ಎಕ್ಸ್‌’ನಲ್ಲಿ ಪತ್ರದ ಪ್ರತಿಯನ್ನು ಹಂಚಿಕೊಂಡು ತಿಳಿಸಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಟ್ವೀಟ್ ಬೆನ್ನಲ್ಲೇ ಉಚ್ಚಾಟನೆ ಬೆಳವಣಿಗೆ
ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಟ್ವೀಟ್ ಮಾಡಿದ ಬೆನ್ನಲ್ಲೇ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟಿಸುವ ವಿಚಾರವು ಹೊರಗೆ ಬಂದಿದೆ.

‘ಮಹುವಾ ಮೊಯಿತ್ರಾ ವಿರುದ್ಧದ ತನಿಖೆಯನ್ನು ಲೋಕಪಾಲ ಸಂಸ್ಥೆಯು ಸಿಬಿಐಗೆ ಶಿಫಾರಸು ಮಾಡಿದೆ,” ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬುಧವಾರ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಹಿತಿ ಹಂಚಿಕೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಆದರೆ, ಮೊಯಿತ್ರಾ ವಿಚಾರದಲ್ಲಿ ಲೋಕಪಾಲ ಸಂಸ್ಥೆಯಾಗಲೀ, ಸಿಬಿಐನಿಂದಾಗಲೀ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಿದ್ದಿಲ್ಲ.

ನಿಶಿಕಾಂತ್ ದುಬೆಯ ಪೋಸ್ಟ್‌ನ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಸಂಸದೆ ಮಹುವಾ ಮೊಯಿತ್ರಾ, ‘ನನಗೆ ಕರೆ ಮಾಡುವ ಮಾಧ್ಯಮಗಳಿಗೆ ನನ್ನ ಉತ್ತರ 13,000 ಕೋಟಿ ರೂ. ಅದಾನಿ ಕಲ್ಲಿದ್ದಲು ಹಗರಣದ ಕುರಿತು ಸಿಬಿಐ ಮೊದಲು ಎಫ್‌ಐಆರ್ ದಾಖಲಿಸಬೇಕಾಗಿದೆ. ಕೇಂದ್ರ ಗೃಹ ಇಲಾಖೆಯ ಕ್ಲಿಯರೆನ್ಸ್‌ನೊಂದಿಗೆ ಭಾರತೀಯ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ಖರೀದಿಸುವ ಅದಾನಿ ಸಂಸ್ಥೆಗಳು ಎಫ್‌ಪಿಐ ಮಾಲೀಕತ್ವವನ್ನು ಹೇಗೆ ಹೊಂದಿದ್ದವು ಎಂಬುದು ರಾಷ್ಟ್ರೀಯ ಭದ್ರತಾ ಸಮಸ್ಯೆಯಾಗಿದೆ. ನನ್ನ ಶೂಗಳನ್ನು ಎಣಿಸಲು ಸಿಬಿಐಗೆ ಸ್ವಾಗತ” ಎಂದು ಛೇಡಿಸಿದ್ದರು.

ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಬದಲಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ಉಡುಗೊರೆಗಳ ರೂಪದಲ್ಲಿ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸ ದುಬೆ ಆರೋಪಿಸಿದ್ದರು.


ಪ್ರಶ್ನೆಗಳನ್ನು ಅಪ್​ಲೋಡ್ ಮಾಡಲು ಮೊಯಿತ್ರಾ ಅವರ ಲೋಕಸಭೆ ಖಾತೆಗೆ ದುಬೈನಿಂದ ಲಾಗ್ ಇನ್ ಆಗಿರುವುದಾಗಿ ಹಿರಾನಂದನಿ ಅಫಿಡವಿಟ್‌ನಲ್ಲಿ ಹೇಳಿಕೊಂಡಿದ್ದಾರೆ. ಆದರೆ, ಲಂಚದ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿದ್ದರು. ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದಾಗಿ ನಂತರ ಒಪ್ಪಿಕೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದಷ್ಟೇ ಲೋಕಸಭೆಯ ನೈತಿಕ ಸಮಿತಿಯ ಮುಂದೆ ಮೊಯಿತ್ರಾ ವಿಚಾರಣೆಗೆ ಹಾಜರಾಗಿದ್ದರು. ಉದ್ಯಮಿ ದರ್ಶನ್ ಹಿರಾನಂದನಿ ಅವರೊಂದಿಗೆ ಸಂಸತ್ತಿನ ಲಾಗಿನ್ ವಿವರಗಳನ್ನು ಹಂಚಿಕೊಳ್ಳುವಾಗ ತಾನು ಯಾವುದೇ ಸಂಸದೀಯ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಸಮಿತಿಗೆ ಮೊಯಿತ್ರಾ ತಿಳಿಸಿದ್ದರು. ಈ ನಡುವೆ ವಿಚಾರಣೆಯಿಂದ ಅರ್ಧದಲ್ಲೇ ಹೊರನಡೆದಿದ್ದ ಸಂಸದೆ, ತೀರಾ ವೈಯಕ್ತಿಕ ಹಾಗೂ ಕೊಳಕು ಪ್ರಶ್ನೆಗಳನ್ನು ಕೇಳಿದ್ದರು ಎಂದು ಬಹಿರಂಗವಾಗಿ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳ ಗೆಲ್ಲಲು ಬಿಜೆಪಿ ಸುರಿದಿದ್ದು ₹286 ಕೋಟಿ; 4 ಚುನಾವಣೆಗಳ ಒಟ್ಟು ವೆಚ್ಚಕ್ಕಿಂತಲೂ ಹೆಚ್ಚು!

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಒಟ್ಟು ₹529.38...

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಕಳವು: ಲಾತೂರ್ ಕೋಚಿಂಗ್ ಉದ್ಯಮಿಯ ಮಗನ ಫಲಿತಾಂಶ ತಡೆ; 2 ವರ್ಷ ಡಿಬಾರ್

ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ...

CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕೇಸ್: ಸುಪ್ರೀಂ ವಕೀಲರಿಂದ ‘AG’ಗೆ ಪತ್ರ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ಉಳಿದಿಬ್ಬರು ಆಯುಕ್ತರು...