ಅರುಣಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ನಬಮ್ ತಿಕಿ ಅವರು ರಾಜ್ಯ ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಬಂ ತುಕಿ ಈ ನಿರ್ಧಾರ ಕೈಗೊಂಡಿದ್ದಾರೆ.
ಇತ್ತೀಚಿಗಷ್ಟೆ ಮೂವರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ತುಕಿ ಅವರು ತಮ್ಮ ರಾಜೀನಾಮೆಯನ್ನು ಎಐಸಿಸಿಗೆ ರವಾನಿಸಿದ್ದಾರೆ.
“ಮಾಜಿ ಮುಖ್ಯಮಂತ್ರಿಗಳುಇತರ ಪಕ್ಷಗಳಿಗೆ ಪಕ್ಷಾಂತರಗೊಂಡ ಶಾಸಕರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ” ಎಂದು ಅರುಣಾಚಲ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗ್ಯಾಮರ್ ತನಾ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಬಾಂಡ್ ಬಹಿರಂಗಗೊಳಿಸಲು ಎಸ್ಬಿಐ ಏಕೆ ಹಿಂಜರಿಯುತ್ತಿದೆ?
ತುಕಿ ಅವರು ಅರಣಾಚಲ ರಾಜ್ಯದ ಸಂಗಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ನಿಂದ ಆರು ಬಾರಿ ಶಾಸಕರಾಗಿದ್ದ ಅರುಣಾಚಲದ ಸಿಎಲ್ಪಿ ನಾಯಕ ಲೊಂಬೊ ತಯಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಕಳೆದ ತಿಂಗಳು ಇತರ ಇಬ್ಬರು ಕಾಂಗ್ರೆಸ್ ಶಾಸಕರಾದ ನಿನೋಂಗ್ ಇರಿಂಗ್ ಹಾಗೂ ವಾಂಗ್ಲಿಂಗ್ ಲೊವಾಂಗದೊಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
