ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಮಾಜಿ ಸಿಎಂ ಪುತ್ರಿಗೆ 4 ಕೋಟಿ ರೂ. ವಂಚನೆ

Date:

ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ.

- Advertisement -

ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂಬೈ ಮೂಲದ ಮಾನ್ಸಿ ಹಾಗೂ ವರುಣ್ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ ಎಂದು ಆರುಷಿ ನಿಶಾಂಕ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಮ್ಮ ನಿವಾಸಕ್ಕೆ ದಂಪತಿ ಆಗಮಿಸಿ ‘ಅಂಯೋಂ ಕಿ ಗುಸ್ತಾಖಿಯಾನ್’ ಚಿತ್ರದಲ್ಲಿ ಪಾತ್ರ ನೀಡುವುದಾಗಿ ಹೇಳಿದ್ದರು. ಅದಕ್ಕಾಗಿ 5 ಕೋಟಿ ರೂ. ತಮಗೆ ಕೊಡಿ ಕೇಳಿದ್ದರು. ಚಿತ್ರ ಬಿಡುಗಡೆಯಾದ ಮೇಲೆ ಬಂದ ಲಾಭದಲ್ಲಿ ಶೇ. 20 ಸೇರಿ 15 ಕೋಟಿ ರೂ. ಕೊಡುವುದಾಗಿ ಭರವಸೆ ನೀಡಿದ್ದರು. ಬಳಿಕ ತನ್ನಿಂದ ಸಿನಿಮಾಗೆ 4 ಕೋಟಿ ರೂ. ಹೂಡಿಕೆ ಮಾಡಿಸಿದ್ದರು. ಇದಕ್ಕೆ ಆರುಷಿ ಕೂಡ ಒಪ್ಪಿಕೊಂಡು 4 ಕಂತುಗಳಲ್ಲಿ 4 ಕೋಟಿ ರೂ. ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ನನ್ನ ಸ್ಕ್ರೀಪ್ಟ್ ಅನ್ನು ತಾವೇ ಫೈನಲ್ ಮಾಡುವುದಕ್ಕೂ ಅವಕಾಶವಿದೆ. ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಲು ಅವಕಾಶ ನೀಡುವುದಾಗಿ ಹೇಳಿದ್ದರು. ಈ ವರ್ಷ ಫೆಬ್ರವರಿ 2ರಂದು ಭಾರತದಲ್ಲಿ ಆಗಬೇಕಾದ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಲಾಗಿದ್ದು, ಉಳಿದ ಭಾಗವನ್ನು ಯುರೋಪಿನಲ್ಲಿ ಚಿತ್ರೀಕರಿಸುವ ಯೋಜನೆ ಮಾಡಲಾಗಿದೆ. ಆದರೆ ನನ್ನನ್ನು ಆಯ್ಕೆ ಮಾಡಿದ್ದ ಸ್ಥಾನದಲ್ಲಿ ಬೇರೆ ನಟಿಯನ್ನು ಆಯ್ಕೆ ಮಾಡಲಾಗಿದೆ. ತನ್ನ ಹಣ ಹಿಂದಿರುಗಿಸಿ ಕೊಡುವಂತೆ ಕೇಳಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯ ನಟಿ ಆರುಷಿ ನಿಶಾಂಕ್ ದೂರಿನ ಮೇಲೆ ಮಾನ್ಸಿ ವರುಣ್ ದಂಪತಿ ಪ್ರಕರಣ ದಾಖಲಿಸಿಕೊಂಡು ಡೆಹ್ರಾಡೂನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...