ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

Date:

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಗೆ ಸೆಷನ್ಸ್‌ ಕೋರ್ಟ್ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಜೊತೆ 2 ಲಕ್ಷ ರೂ. ದಂಡ ಕೂಡ ವಿಧಿಸಲಾಗಿದೆ.

ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಲಾನ್‌ಪುರ್‌ ಪಟ್ಟಣದ ಸೆಷನ್ಸ್‌ ಕೋರ್ಟ್ 1996ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಿದೆ.

ಸಂಜೀವ್‌ ಭಟ್ 1996ರಲ್ಲಿ ಬನಸ್ಕಾಂತ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ ರಾಜಸ್ಥಾನ ಮೂಲದ ವಕೀಲರಾದ ಸುಮೇರ್‌ಸಿಂಗ್‌ ರಾಜ್‌ ಪುರೋಹಿತ್‌ ಎಂಬುವವರನ್ನು ಮಾದಕವಸ್ತು ವಶಪಡಿಸಿಕೊಳ್ಳುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್‌ ಪುರೋಹಿತ್‌ ಅವರನ್ನು ಬಂಧಿಸಿದ್ದ ಸಂಜೀವ್‌ ಭಟ್ ಅವರ ವಿರುದ್ಧ ನಾರ್ಕೋಟಿಕ್ ಡ್ರಕ್ಸ್ ಹಾಗೂ ಸೈಕೋಟ್ರೋಫಿಕಗ ಸಬ್‌ಸ್ಟೆನ್ಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಪುಲೇನ್‌ಪುರ್‌ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ಉಳಿದುಕೊಂಡಿದ್ದ ರಾಜ್‌ ಪುರೋಹಿತ್‌ ವಿರುದ್ಧ ಪ್ರಕರಣ ದಾಖಲಿಸಿದ್ದ ಸಂಜೀವ್‌ ಭಟ್ ಡ್ರಗ್ಸ್‌ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದರು.

ಸುಳ್ಳು ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಸಂಜೀವ್‌ ಭಟ್‌ ಅವರನ್ನು 2015ರಲ್ಲಿ ವಜಾಗೊಳಿಸಲಾಗಿತ್ತು.

ವಿವಾದಿತ ಆಸ್ತಿಯನ್ನು ವರ್ಗಾಯಿಸುವ ಸಲುವಾಗಿ ರಾಜ್‌ ಪುರೋಹಿತ್ ವಿರುದ್ಧ ಬನಸ್ಕಾಂತ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ನಂತರದಲ್ಲಿ ರಾಜಸ್ಥಾನ ಪೊಲೀಸರು ತಿಳಿಸಿದ್ದರು.

ಸಂಜೀವ್‌ ಭಟ್‌ ಅವರನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದಾಗ ಅವರ ಪತ್ನಿ ಶ್ವೇತಾ ಭಟ್ ಕೂಡ ನ್ಯಾಯಾಲಯದಲ್ಲಿದ್ದರು. ಸದ್ಯ ಸಂಜೀವ್‌ ಭಟ್‌ ಅವರನ್ನು ಪೊಲೀಸ್‌ ಕಸ್ಟಡಿಯಲ್ಲಿ ಪಲನ್‌ಪುರ್‌ ಜೈಲಿಗೆ ಕರೆದೊಯ್ಯಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...