ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸುಳ್ಳು ಹಣ ವರ್ಗಾವಣೆ ಹಾಗೂ ನಕಲಿ ದಾಖಲೆಗಳ ಮೂಲಕ ದಾಖಲೆಗಳನ್ನು ತಿರುಚಿ ನೂರಾರು ಕೋಟಿ ಮೌಲ್ಯದ 8.86 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜನವರಿ 31ರಂದು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಹೇಮಂತ್ ಸೊರೇನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ
ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 22 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಮಂತ್ ಸೊರೇನ್ ನಿವಾಸ ಹಾಗೂ ಕಚೇರಿಯಿಂದ 1 ಕೋಟಿ ರೂ ನಗದು ಹಾಗೂ 100 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು.
ಭೂ ಹಗರಣ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಸೇರಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
