ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ; ಆದರೂ, ಗ್ರಾಹಕರಿಗಿಲ್ಲ ಲಾಭ!

Date:

ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 10 ರೂ.ಗಳಷ್ಟು ಕಡಿತಗೊಳಿಸಿ ಶುಕ್ರವಾರ ಆದೇಶಿಸಿದೆ. ಈ ಮೂಲಕ ಪೆಟ್ರೋಲ್ ಮೇಲಿನ ಸುಂಕವು 3 ರೂ.ಗೆ ಮತ್ತು ಡೀಸೆಲ್ ಮೇಲಿನ ಸುಂಕವು ಶೂನ್ಯಕ್ಕೆ ಇಳಿದಿದೆ.

- Advertisement -

ಆದರೆ, ಮೂಲಗಳ ಪ್ರಕಾರ ಈ ಕಡಿತದ ಲಾಭ ಗ್ರಾಹಕರಿಗೆ ಸಿಗುವ ಸಾಧ್ಯತೆ ಕಡಿಮೆ. ತೈಲ ಮಾರುಕಟ್ಟೆ ಕಂಪನಿಗಳು (OMC) ಅನುಭವಿಸುತ್ತಿರುವ ಭಾರಿ ನಷ್ಟವನ್ನು ಸರಿದೂಗಿಸಲು ಈ ಸುಂಕದ ವಿನಾಯಿತಿಯನ್ನು ಬಳಸಿಕೊಳ್ಳಲಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ದಾಟಿದೆ. ಇದರಿಂದಾಗಿ ಭಾರತೀಯ ತೈಲ ಕಂಪನಿಗಳು ಪ್ರತಿ ಲೀಟರ್‌ಗೆ ಅಂದಾಜು 48.8 ರೂಪಾಯಿ ನಷ್ಟ ಅನುಭವಿಸುತ್ತಿವೆ ಎಂದು ವರದಿಯಾಗಿದೆ.

ರಷ್ಯಾ ಬೆಂಬಲಿತ ‘ನಾಯರಾ ಎನರ್ಜಿ’ ಸಂಸ್ಥೆಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 5.3 ಮತ್ತು 3 ರೂ.ಗಳಷ್ಟು ಹೆಚ್ಚಿಸಿರುವುದು ಮಾರುಕಟ್ಟೆಯ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎನ್ನಲಾಗಿದೆ.

ಈ ಲೇಖನ ಓದಿದ್ದೀರಾ?: ಯೂರೋಪ್‌ಗೆ ಸಾಗಬೇಕಿದ್ದ ಎಲ್‌ಪಿಜಿ-ಎಲ್‌ಎನ್‌ಜಿ ಹಡಗುಗಳ ದಿಕ್ಕು ಬದಲಾವಣೆ: ಏಷ್ಯಾದತ್ತ ಮುಖಮಾಡಲು ಕಾರಣವೇನು?

ಹಾರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ಇಂಧನ ಪೂರೈಕೆ ಮಾರ್ಗವಾಗಿದ್ದು, ಜಾಗತಿಕ ಕಚ್ಚಾ ತೈಲ ಮತ್ತು ಅನಿಲದ ಐದನೇ ಒಂದು ಭಾಗ ಈ ಮಾರ್ಗದ ಮೂಲಕವೇ ಸಾಗುತ್ತದೆ. ಭಾರತ ತನ್ನ ಕಚ್ಚಾ ತೈಲ ಆಮದಿನ 40% ರಿಂದ 50% ತೈಲವನ್ನು ಮತ್ತು 17% ಎಲ್‌ಎನ್‌ಜಿಯನ್ನು ಕತಾರ್ ಮತ್ತು ಯುಎಇಯಿಂದ ಆಮದು ಮಾಡಿಕೊಳ್ಳುತ್ತದೆ.

ಭಾರತದ ಬಳಿ ಪ್ರಸ್ತುತ 60 ದಿನಗಳಿಗೆ ಆಗುವಷ್ಟು ತೈಲ ದಾಸ್ತಾನು ಮತ್ತು 30 ದಿನಗಳಿಗೆ ಆಗುವಷ್ಟು ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

‘ಬುಲ್ಡೋಜರ್’ ಈಗ ಬ್ರ್ಯಾಂಡ್ ಎಂದ ಸಿಎಂ ಯೋಗಿ; ಪರ-ವಿರೋಧದ ಚರ್ಚೆ!

ಬುಲ್ಡೋಜರ್‌ಗಳು ಇಂದು ಉತ್ತರ ಪ್ರದೇಶದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ಬ್ರ್ಯಾಂಡ್ ಆಗಿ...