ರಾಹುಲ್ ನ್ಯಾಯಯಾತ್ರೆಗೆ ಪಾಲ್ಗೊಳ್ಳಿ ಎಂದ ಕಮಲ್‌ ನಾಥ್ : ಬಿಜೆಪಿ ಸೇರ್ಪಡೆಯ ವದಂತಿಗೆ ತೆರೆ

Date:

ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್‌ ನಾಥ್ ರಾಜ್ಯದ ಜನರನ್ನು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರನ್ನು ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,  ಭಾರತ್ ಜೋಡೋ ನ್ಯಾಯ ಯಾತ್ರೆಯೊಂದಿಗೆ ಆಗಮಿಸುತ್ತಿರುವ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಲು ಮಧ್ಯ ಪ್ರದೇಶದ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹರ್ಷಿತರಾಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರು ದೇಶದ ಬೀದಿಗಳ ಮೂಲಕ ಬಿಜೆಪಿಯ ಅನ್ಯಾಯ, ದಬ್ಬಾಳಿಕೆ ಹಾಗೂ ದೌರ್ಜನ್ಯದ ವಿರುದ್ಧ ಹೋರಾಡಲು ನಮ್ಮನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಮಧ್ಯ ಪ್ರದೇಶದ ಜನರು ಹಾಗೂ ಕಾಂಗ್ರೆಸ್‌ನ ಧೈರ್ಯಶಾಲಿ ಕಾರ್ಯಕರ್ತರು ಭಾರತ್‌ ಜೋಡೋ ನ್ಯಾಯಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಹುಲ್‌ ಅವರಿಗೆ ಶಕ್ತಿ ಹಾಗೂ ಉತ್ಸಾಹ ನೀಡಬೇಕು. ಅನ್ಯಾಯವನ್ನು ಕೊನೆಗೊಳಿಸಲು ನಾವೆಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳೋಣ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೂಲಕ ಕಮಲ್‌ನಾಥ್ ಅವರು ಬಿಜೆಪಿಗೆ ಸೇರುವ ಎಲ್ಲ ವದಂತಿಗಳಿಗೂ ತೆರೆ ಎಳೆದಿದ್ದಾರೆ.

ಈ ನಡುವೆ ಕಮಲ್‌ನಾಥ್ ಅವರ ಪ್ರಾಬಲ್ಯದ ಮಧ್ಯಪ್ರದೇಶದ ಚಿನ್‌ದ್ವಾರ ಜಿಲ್ಲೆಯ ಹಲವು ಕಾಂಗ್ರೆಸ್ ನಾಯಕರು ಬುಧವಾರ(ಫೆ.21) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚಿನ್‌ದ್ವಾರ ಜಿಲ್ಲೆಯ ಸುಮಾರು 1500 ಸ್ಥಳೀಯ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದವರಲ್ಲಿ ಜಿಲ್ಲಾ ಕಾರ್ಯದರ್ಶಿಗಳು, ಪಾಲಿಕೆ ಸದಸ್ಯರು, ಸರಪಂಚರು, ಜನಪದ ಸದಸ್ಯರು ಮುಂತಾದವರು ಇದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...