ಭವಿಷ್ಯದ ಆಂದೋಲನಗಳ ತಡೆಗೆ 1974ರ ನಂತರದ ಪ್ರತಿಭಟನೆಗಳ ಅಧ್ಯಯನಕ್ಕೆ ಅಮಿತ್ ಶಾ ಆದೇಶ

Date:

Advertisements

ಭವಿಷ್ಯದಲ್ಲಿ ‘ಪಟ್ಟಭದ್ರ ಹಿತಾಸಕ್ತಿಗಳಿಂದ’ ಸಾಮೂಹಿಕ ಆಂದೋಲನಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಸ್ವಾತಂತ್ರ್ಯಾ ನಂತರದ, ವಿಶೇಷವಾಗಿ 1974ರ ನಂತರದ ಎಲ್ಲ ಪ್ರತಿಭಟನೆಗಳ ಅಧ್ಯಯನ ನಡೆಸುವಂತೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಕ್ಕೆ (BPR&D) ಆದೇಶಿಸಿದ್ದಾರೆ ಎಂದು ಹಿರಿಯ ಸರಕಾರಿ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಪ್ರತಿಭಟನೆಗಳಿಗೆ ಕಾರಣಗಳು, ಹಣಕಾಸು ನೆರವು, ಅಂತಿಮ ಫಲಿತಾಂಶಗಳು ಮತ್ತು ತೆರೆಮರೆಯಲ್ಲಿನ ರೂವಾರಿಗಳನ್ನು ವಿಶ್ಲೇಷಿಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು(ಎಸ್‌ಒಪಿ) ಸಿದ್ಧಪಡಿಸುವಂತೆಯೂ ಅವರು ಸೂಚಿಸಿದ್ದಾರೆ.

ಗುಪ್ತಚರ ಸಂಸ್ಥೆಯು(ಐಬಿ) ಜುಲೈ ಕೊನೆಯ ವಾರದಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ರಾಷ್ಟ್ರೀಯ ಭದ್ರತಾ ಕಾರ್ಯತಂತ್ರಗಳ ಸಮ್ಮೇಳನ-2025’ರಲ್ಲಿ ಶಾ ಈ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಮಿತ್ ಶಾ ನಿರ್ದೇಶನದ ಮೇರೆಗೆ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ BPR&D ಅಪರಾಧ ತನಿಖಾ ಇಲಾಖೆಗಳ(ಸಿಐಡಿ) ವರದಿಗಳು ಸೇರಿದಂತೆ ಹಳೆಯ ಪ್ರಕರಣಗಳ ಕಡತಗಳಿಗಾಗಿ ರಾಜ್ಯಗಳ ಪೋಲಿಸ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ತಂಡವೊಂದನ್ನು ರಚಿಸುವ ಪ್ರಕ್ರಿಯೆಯಲ್ಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತಾಂತರ ವಿಚಾರದಲ್ಲಿ ಬಿಜೆಪಿಯ ಬೂಟಾಟಿಕೆ ಮತ್ತು ವಾಸ್ತವ

ಅಧಿಕಾರಿಯೊಬ್ಬರ ಪ್ರಕಾರ, ಇಂತಹ ಪ್ರತಿಭಟನೆಗಳಿಗೆ ಹಣಕಾಸು ನೆರವುಗಳನ್ನು ಪರಿಶೀಲಿಸಲು ಜಾರಿ ನಿರ್ದೇಶನಾಲಯ(ಇ.ಡಿ), ಹಣಕಾಸು ಗುಪ್ತಚರ ಘಟಕ-ಭಾರತ(ಎಫ್‌ಐಯು-ಐಎನ್‌ಡಿ) ಮತ್ತು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ)ಯಂತಹ ಹಣಕಾಸು ಸಂಸ್ಥೆಗಳನ್ನು ಸೇರಿಸಿಕೊಳ್ಳುವಂತೆಯೂ ಅಮಿತ್ ಶಾ BPR&Dಗೆ ಸೂಚಿಸಿದ್ದಾರೆ.

ಹೆಚ್ಚುವರಿಯಾಗಿ, ಭಯೋತ್ಪಾದನೆಗೆ ಹಣಕಾಸು ನೆರವು ಜಾಲಗಳನ್ನು ನಿರ್ಮೂಲನ ಮಾಡಲು ಹಣಕಾಸು ಅಕ್ರಮಗಳ ವಿಶ್ಲೇಷಣೆಯ ಮೂಲಕ ಅಪರಿಚಿತ ಭಯೋತ್ಪಾದಕ ಜಾಲಗಳು,ಅವುಗಳ ಸಂಪರ್ಕಗಳು ಮತ್ತು ಉದ್ದೇಶಗಳನ್ನು ಗುರುತಿಸಲು ಎಸ್‌ಒಪಿಯನ್ನು ಸಿದ್ಧಗೊಳಿಸುವಂತೆ ಇ.ಡಿ., ಎಫ್‌ಐಯು-ಐಎನ್‌ಡಿ ಮತ್ತು ಸಿಬಿಡಿಟಿಗಳಿಗೆ ಸೂಚಿಸಲಾಗಿದೆ.

ಕಾಲ್ತುಳಿತದಂತಹ ಘಟನೆಗಳ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ವಿವಿಧ ಧಾರ್ಮಿಕ ಸಮಾವೇಶಗಳ ಕುರಿತು ಅಧ್ಯಯನಕ್ಕಾಗಿ ರಾಜ್ಯಗಳ ಪೋಲಿಸ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಮತ್ತು ಅಂತಹ ಸಮಾವೇಶಗಳ ಮೇಲೆ ನಿಗಾ ಹಾಗೂ ನಿಯಂತ್ರಣಕ್ಕಾಗಿ ಎಸ್‌ಒಪಿಯೊಂದನ್ನು ರೂಪಿಸುವಂತೆಯೂ ಶಾ BPR&Dಗೆ ಸೂಚಿಸಿದ್ದಾರೆನ್ನಲಾಗಿದೆ.

ಮೂಲಗಳ ಪ್ರಕಾರ ಪಂಜಾಬಿನಲ್ಲಿ ಖಾಲಿಸ್ತಾನಿ ಉಗ್ರವಾದ ಮತ್ತು ಸಾಮಾನ್ಯ ಕ್ರಿಮಿನಲ್ ಚಟುವಟಿಕೆಗಳನ್ನು ಎದುರಿಸಲು ಪ್ರತ್ಯೇಕ ಕಾರ್ಯವಿಧಾನಗಳನ್ನು ರೂಪಿಸುವಂತೆ ಶಾ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಡಿಎ),ಗಡಿ ರಕ್ಷಣಾ ಪಡೆ(ಬಿಎಸ್‌ಎಫ್) ಮತ್ತು ಮಾದಕ ದ್ರವ್ಯ ನಿಯಂತ್ರಣ ಘಟಕ(ಎನ್‌ಸಿಬಿ)ಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X