ಕೇರಳ ಚುನಾವಣೆ | ಉಚ್ಚಾಟಿತ ಸಿಪಿಐ ನಾಯಕ ಮುಕುಂದನ್ ಬಿಜೆಪಿಗೆ ಸೇರ್ಪಡೆ

Date:

ಕೇರಳದ ನಟ್ಟಿಕಾದ ಮಾಜಿ ಸಿಪಿಐ ನಾಯಕ ಮತ್ತು ಹಾಲಿ ಶಾಸಕ ಸಿ.ಸಿ. ಮುಕುಂದನ್ ಅವರು ಸೋಮವಾರ ಮಾರ್ಚ್ 16ರಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನ ತ್ರಿಶೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಸಮಿತಿ ಕಚೇರಿಗೆ ಭೇಟಿ ನೀಡಿ ಪಕ್ಷಕ್ಕೆ ಸೇರಿದ್ದಾರೆ. ಏಪ್ರಿಲ್ 9ರಂದು ಕೇರಳ ವಿಧಾನಸಭೆ ಚುನಾವಣೆ ನಡೆಯಲಿದ್ದು ನಟ್ಟಿಕಾ ಕ್ಷೇತ್ರದಲ್ಲಿ ಗೀತಾ ಗೋಪಿ ಅವರನ್ನು ಕಣಕ್ಕಿಳಿಸಲು ಸಿಪಿಐ ನಿರ್ಧರಿಸಿದೆ. ಇದಾದ ಬಳಿಕ ಮುಕುಂದನ್‌ಗೆ ಸಿಪಿಐ ಜತೆ ಭಿನ್ನಾಭಿಪ್ರಾಯ ಉಂಟಾಗಿದೆ.

- Advertisement -

ಟಿಕೆಟ್ ನಿರಾಕರಿಸಿದ ನಂತರ, ಮುಕುಂದನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಘೋಷಿಸಿದರು. ನಟ್ಟಿಕಾ ಕ್ಷೇತ್ರದ ಟಿಕೆಟ್ ಅನ್ನು ಹಣಕ್ಕಾಗಿ ಸಿಪಿಐ ಮಾರಾಟ ಮಾಡಿದೆ ಎಂದು ಆರೋಪಿಸಿದರು. ಇದಾದ ಬಳಿಕ ಸಿಪಿಐ ಮುಕುಂದನ್ ಅವರನ್ನು ಉಚ್ಚಾಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಇದಾದ ಬಳಿಕ ಮುಕುಂದನ್ ಮೊದಲು ಕಾಂಗ್ರೆಸ್‌ನ ಬೆಂಬಲ ಪಡೆಯಲು ಯತ್ನಿಸಿದರು. ಆದರೆ ಕಾಂಗ್ರೆಸ್ ಸುನಿಲ್ ಲಾಲೂರ್ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿತು. ಹಾಗೆಯೇ ಬಿಜೆಪಿ ಸೇರುವ ಊಹಾಪೋಹಗಳನ್ನು ಮುಕುಂದನ್ ಈ ಹಿಂದೆ ತಳ್ಳಿ ಹಾಕಿದ್ದರು. ಆದರೆ ಎಲ್‌ಡಿಎಫ್, ಯುಡಿಎಫ್‌ ಎರಡೂ ಕಡೆಯು ಜಾಗವಿಲ್ಲ ಎಂದಾದ ಬಳಿಕ ಇದೀಗ ಎನ್‌ಡಿಎ ಸೇರಿದ್ದಾರೆ. ಆಮ್ ಆದ್ಮಿ ಪಕ್ಷವೂ ಮುಕುಂದನ್ ಅವರನ್ನು ಸಂಪರ್ಕಿಸಿದೆ. ಆದರೆ ಮುಕುಂದನ್ ಬಿಜೆಪಿ ಸೇರುವ ನಿರ್ಧಾರ ಮಾಡಿದ್ದಾರೆ. ನಟ್ಟಿಕಾದಲ್ಲಿ ಸ್ಪರ್ಧಿಸುವ ಸಾಧ್ಯತೆಯೂ ಇದೆ.

ಇನ್ನು ಬಿಜೆಪಿ ಸೇರಿದ ಬಳಿಕ ಮಾತನಾಡಿದ ಮುಕುಂದನ್, ನಿಧಿ ಸಂಗ್ರಹಿಸದ ಕಾರಣ ಸಿಪಿಐ ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಿದೆ ಎಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುವುದಾಗಿಯೂ ಹೇಳಿದ್ದಾರೆ.

ಇನ್ನು ಮುಕುಂದನ್ ಬಿಜೆಪಿ ಸೇರುವ ಕೆಲವು ಗಂಟೆಗಳ ಮೊದಲು, ಬಿಜೆಪಿ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ತಿರುವನಂತಪುರದಲ್ಲಿ ಎನ್‌ಡಿಎ ಮುಂದಿನ ಎರಡು ದಿನಗಳಲ್ಲಿ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...