ತೆಲಂಗಾಣ | ಕೆಮಿಕಲ್‌ ಕಾರ್ಖಾನೆ ಸ್ಫೋಟ ಪ್ರಕರಣ, ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆ

Date:

ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

- Advertisement -

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಸ್ಫೋಟವು ಎಷ್ಟು ಪ್ರಬಲವಾಗಿತ್ತೆಂದರೆ, ಕೆಲವು ಕಾರ್ಮಿಕರು ಸುಮಾರು 100 ಮೀಟರ್ ದೂರದವರೆಗೂ ಬಿದ್ದಿದ್ದರು. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಎಲ್ಲೆಡೆ ಆವರಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕಾರ್ಖಾನೆಯೊಳಗಿನ ಸ್ಫೋಟದಿಂದಾಗಿ ಮೇಲ್ಬಾವಣಿ ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿರುವುದಾಗಿ ವರದಿಯಾಗಿದೆ.

ಕೇಂದ್ರದಿಂದ ₹2 ಲಕ್ಷ ಪರಿಹಾರ

ಪ್ರಧಾನಿ ನರೇಂದ್ರ ಮೋದಿ ಅವರು ದುರಂತಕ್ಕೆ ಶೋಕ ವ್ಯಕ್ತಪಡಿಸಿ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50 ಸಾವಿರ ನಗದು ಪರಿಹಾರ ಘೋಷಿಸಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದು, ಅವಶೇಷಗಳಡಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರಿಗೆ ಸೂಕ್ತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ ಕಟ್ಟಿ ಉತ್ತರ ಕೊಟ್ಟಿದ್ದು ಹೇಗೆ?

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು...

ಹೈಕೋರ್ಟ್ ತೀರ್ಪು ಬರುವವರೆಗೆ ಸೋನಮ್ ವಾಂಗ್‌ಚುಕ್ ಶಾಲೆಯ ಚಟುವಟಿಕೆ ತಡೆಗೆ ಲಡಾಖ್ ಆಡಳಿತ ಆದೇಶ

ಪರಿಸರ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ 'ಹಿಮಾಲಯನ್...

ಕರ್ನಾಟಕ ಬರ: 22,400 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ; ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ ಪತ್ರ

ಕರ್ನಾಟಕದ ಬರಪೀಡಿತ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರಧಾನಿ...