ಪತಿಯ ವಿವಾಹೇತರ ಸಂಬಂಧ ಕ್ರೌರ್ಯವಾಗಲೀ, ಆತ್ಮಹತ್ಯೆಗೆ ಪ್ರಚೋದನೆಯಾಗಲೀ ಅಲ್ಲ: ಹೈಕೋರ್ಟ್

Date:

ಪತಿಯ ವಿವಾಹೇತರ ಸಂಬಂಧವು ಪತ್ನಿಗೆ ತೊಂದರೆ ಉಂಟುಮಾಡಿದೆ ಎಂದು ಸಾಬೀತಾಗದ ಹೊರತು, ಅದು ಕ್ರೌರ್ಯ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಆಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

- Advertisement -

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಕೊಲೆ ಆರೋಪದ‌ ಮೇಲೆ‌ ಬಂಧನಕ್ಕೊಳಗಾಗಿದ್ದ ಆರೋಪಿ ಪತಿಗೆ ಜಾಮೀನು ಮಂಜೂರು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಮಹಿಳೆಯೊಬ್ಬರು 2024ರ ಮಾರ್ಚ್ 18ರಂದು ತನ್ನ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಆತ್ಮಹತ್ಯೆಗೆ ಪ್ರಚೋದನೆ, ವರದಕ್ಷಿಣೆ ಕಿರುಕುಳ ಹಾಗೂ ಪತಿಯ ವಿವಾಹೇತರ ಸಂಬಂಧ ಕಾರಣವೆಂದು ಆರೋಪಿಸಲಾಗಿತ್ತು. ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದರು.

ಆರೋಪಿ ಪತಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ನರುಲಾ ವಿಚಾರಣೆ ನಡೆಸಿದ್ದಾರೆ. “ವಿವಾಹೇತರ ಸಂಬಂಧವು ಪತಿಯನ್ನು ವರದಕ್ಷಿಣೆ, ಕೊಲೆಗೆ ಸಿಲುಕಿಸಲು ಆಧಾರವಲ್ಲ” ಎಂದು ಹೇಳಿದ್ದಾರೆ.

“ಮೃತ ಮಹಿಳೆಯು ಪತಿಯ ವಿವಾಹೇತರ ಸಂಬಂಧದ ಕಾರಣಕ್ಕಾಗಿ ಸಾವನ್ನಪ್ಪಿದ್ದರೆ (ಆತ್ಮಹತ್ಯೆ ಮಾಡಿಕೊಂಡಿದ್ದರೆ) ಪ್ರಕರಣದಲ್ಲಿ ವರದಕ್ಷಿಣೆ ಬೇಡಿಕೆ ಅಥವಾ ಕಿರುಕುಳ ಹೇಗೆ ಬರುತ್ತದೆ. ವಿವಾಹೇತರ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳ ನಡುವಿನ ಸಂಬಂಧವನ್ನು ಸಾಕ್ಷ್ಯಗಳ ಆಧಾರದ ಮೇಲೆ ಸಾಬೀತುಪಡಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಪ್ರಕರಣದಲ್ಲಿ ಮಹಿಳೆ ಜೀವಂತವಾಗಿರುವವರೆಗೆ, ಮಹಿಳೆಯಾಗಲೀ ಅಥವಾ ಆಕೆಯ ಪೋಷಕರಾಗಲೀ ವರದಕ್ಷಿಣೆ ಕಿರುಕುಳದ ಯಾವುದೇ ಆರೋಪ ಮಾಡಿಲ್ಲ. ದೂರನ್ನೂ ನೀಡಿಲ್ಲ. ಮಹಿಳೆ ಮೃತಪಟ್ಟ ಬಳಿಕ ವರದಕ್ಷಿಣೆ ಆರೋಪ‌ ಮಾಡಲಾಗಿದೆ. ಇಂತಹ ಆರೋಪಗಳು ನಂಬಿಕಾರ್ಹವಲ್ಲ. ಪ್ರಕರಣದ ಪೂರ್ಣ ವಿಚಾರಣೆಯ ನಂತರವೇ ನ್ಯಾಯಾಲಯವು ತನ್ನ ಅಂತಿಮ ನಿರ್ಧಾರವನ್ನು ನೀಡಲು ಸಾಧ್ಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...