ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ

Date:

ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ದಲಿತ ವ್ಯಕ್ತಿಯನ್ನು ಥಳಿಸಿ, ಬೆತ್ತಲೆಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.ಸವರ್ಣೀಯರ ಗುಂಪೊಂದು ದಲಿತನನ್ನು ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮರೆದಿದೆ.

- Advertisement -

ಗುಜರಾತ್‌ನ ಸಬರ್ ಕಾಂತ ಜಿಲ್ಲೆಯಲ್ಲಿ ವಡೋಲ್ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮಾರ್ಚ್‌ 11ರಂದು ಘಟನೆ ನಡೆದಿದ್ದು, ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ, ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ಆಧಾರಿಸಿ ಇದಾರ್ ಪೊಲೀಸ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಕರಣದ ಬಗ್ಗೆ ವಿವರಿಸಿರುವ ಇದಾರ್ ಪೊಲೀಸ್ ಇನ್ಸ್‌ಪೆಕ್ಟರ್ ಚೇತನ್ ರಾಥೋಡ್, “ಘಟನೆ ಸಂಬಂಧ 15 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 9 ಮಂದಿಯನ್ನು ಬಂಧಿಸಿದ್ದೇವೆ. ತೀವ್ರವಾಗಿ ಹಲ್ಲೆಗೊಳಗಾಗಿದ್ದ ದಲಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸಂತ್ರಸ್ತ ದಲಿತ ವ್ಯಕ್ತಿ ನಿರ್ಮಾಣ ಕಾರ್ಮಿಕನಾಗಿದ್ದು, ಸವರ್ಣೀಯರ ವಿಚಾರದಲ್ಲಿ ಭಯಭೀತನಾಗಿದ್ದಾರೆ. ಆರಂಭದಲ್ಲಿ ತಾನು ಮೆಟ್ಟಿಲುಗಳಿಂದ ಜಾರಿ ಬಿದ್ದುದ್ದಾಗಿ ಸುಳ್ಳು ಹೇಳಿದ್ದರು. ಆದರೆ, ವಿಡಿಯೋ ವೈರಲ್ ಆದ ಬಳಿಕ, ಘಟನೆಯ ಹಿನ್ನೆಲೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನನ್ನು ಅವರ ಕೆಲಸದ ಸ್ಥಳಗಳಿಗೆ ಕರೆದುಕೊಂಡು ಹೋದಾಗ ಜಾರಿ ಬಿದ್ದೆನೆಂದು ಬರೆಸಿದ್ದಾನೆ. ಅಂತಹ ಒಂದು ಸ್ಥಳದಲ್ಲಿ ಅವನು ಆ ಮಹಿಳೆಯನ್ನು ಭೇಟಿಯಾದನು ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರೂ ಸಹ ವಿವಾಹಿತರಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

ದೌರ್ಜನ್ಯದ ವಿಡಿಯೋವನ್ನು ಗಮನಿಸಿದ ಪೊಲೀಸರು ಸಂತ್ರಸ್ತನನ್ನು ಸಂಪರ್ಕಿಸಿದ್ದು, ದೂರು ದಾಖಲಿಸುವಂತೆ ಮನವೊಲಿಸಿದ್ದಾರೆ. ಬಳಿಕ, ಸಂತ್ರಸ್ತ ದಲಿತ ದೂರು ನೀಡಿದ್ದಾರೆ. ದೂರಿನಲ್ಲಿ, ಸಂಜಯ್ ಈಶ್ವರ್ ಠಾಕೂರ್ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ಕಿಶನ್ ಸೆಂಧಾಜಿ ಠಾಕೂರ್, ಮನೋಜ್ ಅಲಿಯಾಸ್ ಮನಾಜಿ ಸೋಮಾಜಿ ಠಾಕೂರ್, ನರೇಶ್ ಈಶ್ವರ್ ಠಾಕೂರ್, ನುನೋ ಅಲಿಯಾಸ್ ಹರೇಶ್ ಠಾಕೂರ್, ಮಂಗಾಜಿ ಸೋಮಾಜಿ ಠಾಕೂರ್, ಅತುಲ್ಜಿ ವಿನಾಜಿ ಠಾಕೂರ್, ಅರುಣ್ ಬಾಲ್ಕೃಷ್ಣ ಬರೋಟ್, ಉಮೇಶ್ ಜಿತೇಂದ್ರ ಬರೋಟ್, ಜ್ಯೋತ್ಸ್ನಾ ಸಂಜಯ್ ಠಾಕೂರ್, ವಿಶಾಲ್ ಪೆಲಾಡ್ ಸುತಾರ್, ಚೇತನ್ ಈಶ್ವರ್ ನಯೀ ಎಂಬವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಈ ಎಲ್ಲ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 137(2) (ಅಪಹರಣ), 189(2) (ಕಾನೂನುಬಾಹಿರ ಸಭೆ), 191(2) (ಗಲಭೆ), 190 (ಕಾನೂನುಬಾಹಿರ ಸಭೆಗೆ ಸಾಮೂಹಿಕ ಹೊಣೆಗಾರಿಕೆ), 310(2) (ದರೋಡೆ), 352 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಅವಮಾನ) ಮತ್ತು 351(3) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...