ವಿವಾಹೇತರ ಸಂಬಂಧ ಆರೋಪ| ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳ ಹತ್ಯೆ

Date:

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಮೊಮ್ಮಗಳನ್ನು ಆಕೆಯ ಪತಿ ಹತ್ಯೆಗೈದಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮಾಂಝಿ ಅವರ ಮೊಮ್ಮಗಳು ಸುಷ್ಮಾ ದೇವಿ ಅವರನ್ನು ಆಕೆಯ ಪತಿ ರಮೇಶ್‌ ಎಂಬಾತ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದಂಪತಿಗಳು ಗಯಾ ಜಿಲ್ಲೆಯ ಟಿಟುವಾ ಗ್ರಾಮದಲ್ಲಿ ವಾಸವಾಗಿದ್ದರು. ರಮೇಶ್‌ ವೃತ್ತಿಯಲ್ಲಿ ಚಾಲಕನಾಗಿದ್ದಾನೆ ಎಂದು ಹೇಳಲಾಗಿದೆ. ಬುಧವಾರ ರಾತ್ರಿ ಮನೆಗೆ ಬಂದ ರಮೇಶ್‌ ಏಕಾಏಕಿ ಸುಷ್ಮಾ ದೇವಿ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ.

ಸುಷ್ಮಾ ದೇವಿ ಬೇರೊಬ್ಬ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕಾಗಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಸುಷ್ಮಾ ದೇವಿ ಮೇಲೆ ರಮೇಶ್‌ ಗುಂಡು ಹಾರಿಸಿದ್ದು, ಗಾಯಗೊಂಡಿದ್ದ ಸುಷ್ಮಾ ದೇವಿ ಪ್ರಜ್ಞೆ ತಪ್ಪಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿ ರಮೇಶ್‌ ಪರಾರಿಯಾಗಿದ್ದಾನೆ. ಕೃತ್ಯ ನಡೆದ ಸ್ಥಳದಲ್ಲಿ ಪಿಸ್ತೂಲ್ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದಾಗ ಮನೆಯಲ್ಲಿ ಸುಷ್ಮಾ ದೇವಿ ಅವರ ಸಹೋದರಿ ಪೂನಂ ಅವರು ಕೂಡ ಇದ್ದರು. “ಸುಷ್ಮಾ ದೇವಿ ಮತ್ತು ರಮೇಶ್ ತಮ್ಮ ಕೋಣೆಯಲ್ಲಿ ಗಲಾಟೆ ಮಾಡುತ್ತಿದ್ದರು. ಆಗ, ಸುಷ್ಮಾ ದೇವಿ ಮೇಲೆ ರಮೇಶ್‌ ಗುಂಡು ಹಾರಿಸಿದರು” ಎಂದು ಪೂನಂ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಗುಂಡೇಟಿನ ಶಬ್ದ ಕೇಳಿ ನಾನು ಸುಷ್ಮಾ ಅವರ ಕೋಣೆಗೆ ಧಾವಿಸಿದೆ. ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು” ಎಂದು ಅವರು ಹೇಳಿದ್ದಾರೆ.

“ಘಟನೆ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮತ್ತು ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಿದ್ದೇವೆ. ಶೀಘ್ರವೇ ಆರೋಪಿಯನ್ನು ಬಂಧಿಸುತ್ತೇವೆ” ಎಂದು ಗಯಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಆನಂದ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...