ವಿವಾಹೇತರ ಸಂಬಂಧ ಆರೋಪ: ಜೋಡಿಯನ್ನು ಕಟ್ಟಿಹಾಕಿ ಹಲ್ಲೆ – ಶುದ್ಧೀಕರಿಸಿ ವಿಕೃತಿ

Date:

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆ ಮತ್ತು ಯುವಕನನ್ನು ಕಟ್ಟಿಹಾಕಿ ಹಲ್ಲೆ ನಡೆಸಿ, ಇಬ್ಬರನ್ನೂ ಶುದ್ಧೀಕರಿಸುತ್ತೇವೆಂದು ಗೋಮೂತ್ರ ಸುರಿದು ಸ್ಥಳೀಯರು ವಿಕೃತಿ ಮೆರೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

- Advertisement -

ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್‌ ಪಟ್ಟಣದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆ ಮತ್ತು ಯುವಕನನ್ನು ಒಟ್ಟಿಗೆ ಕಟ್ಟಿಹಾಕಿದ್ದ ಸ್ಥಳೀಯರು, ಅವರ ಮೇಲೆ ನೀರು, ಗೋಮೂತ್ರ ಸುರಿದು ಶುದ್ಧೀಕರಿಸಿದ್ದೇವೆಂದು ವಿಕೃತಿ ಮೆರೆದಿದ್ದಾರೆ. ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸುಲ್ತಾನಾಬಾದ್‌ನ ನಿವಾಸಿ ಮೌನಿಕಾ ಮತ್ತು ಭೂಪಾಲಪಳ್ಳಿಯ ಸ್ವಾಮಿ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದರು. ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ನಂತರದಲ್ಲಿ ಇಬ್ಬರೂ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ, ಮೌನಿಕಾ ಮನೆಗೆ ಬಂದಿದ್ದ ಸ್ವಾಮಿ ಕಳೆದ ಮೂರು ದಿನಗಳಿಂದ ಮೌನಿಕಾ ಅವರ ಮನೆಯಲ್ಲಿಯೇ ಉಳಿದಿದ್ದರು. ಅವರ ಸಂಬಂಧದ ಬಗ್ಗೆ ಅನುಮಾನಗೊಂಡ ಸ್ಥಳೀಯರು ಅವರಿಬ್ಬರನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ, ಹಲ್ಲೆಗೈದಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...