ವಿವಾಹೇತರ ಸಂಬಂಧ | ವಿಚ್ಛೇದನ ಕೇಳಿದ ಪತ್ನಿ ಮೇಲೆ ಆ್ಯಸಿಡ್ ಎರಚಿದ ವಿಕೃತ ಪತಿ

Date:

ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾನೆಂದು ಕಂಡುಕೊಂಡ ಪತ್ನಿ, ಆತನಿಂದ ವಿಚ್ಛೇದನ ಕೇಳಿದ್ದು, ಆಕೆಯ ಮೇಲೆ ವಿಕೃತ ಪತಿ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.

- Advertisement -

27 ವರ್ಷದ ಸಂತ್ರಸ್ತ ಮಹಿಳೆ ಮತ್ತು ಆಕೆಯ ವಿಕೃತ ಪತಿ 2019ರಲ್ಲಿ ಪ್ರೇಮವಿವಾಹವಾಗಿದ್ದರು. ಇತ್ತೀಚೆಗೆ, ಆತ ಮತ್ತೊಂಬ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾನೆಂಬುದು ಆಕೆಗೆ ಗೊತ್ತಾಗಿತ್ತು. ತನ್ನ ಪತಿಯ ನಡೆಯಿಂದ ನೊಂದ ಪತ್ನಿ, ಗಂಡನನ್ನು ತೊರೆದು ಮಲಾಡ್‌ನಲ್ಲಿರುವ ತನ್ನ ತಾಯಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾದಕ ವ್ಯಸನಿಯೂ ಆಗಿದ್ದ ಆರೋಪಿ ಪತಿ, ಬುಧವಾರ ಆಕೆಯ ಮನೆಗೆ ನುಗ್ಗಿ, ಮಹಿಳೆಯ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ. ಆಕೆಯ ಮುಖ ಮತ್ತು ದೇಹದ ಇತರ ಭಾಗಗಳಿಗೆ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ?: ವೃದ್ದಾಪ್ಯ ವೇತನಕ್ಕಾಗಿ 2 ಕಿ.ಮೀ ತೆವಳಿಕೊಂಡೇ ಕಚೇರಿಗೆ ಬಂದ ವೃದ್ಧ ಮಹಿಳೆ; ಮನಕಲಕುವ ವಿಡಿಯೋ ವೈರಲ್

ಆರೋಪಿ, ವಿಕೃತ ಪತಿಯ ವಿರುದ್ದ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 124 (2), 311, 333 ಹಾಗೂ 352ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...