ಪ್ರಧಾನಿ ಮೋದಿ ವಿಡಿಯೋ ಕಿತ್ತೆಸೆದಿದ್ದ ಫೇಸ್‌ಬುಕ್; ಜುಕರ್‌ಬರ್ಗ್ ಕ್ಷಮಾಪಣೆಗೆ 3 ದಿನಗಳ ಗಡುವು ನೀಡಿದ ಸಂಸದೀಯ ಸಮಿತಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕೆ (ಡಿಲೀಟ್) ಸಂಬಂಧಿಸಿದಂತೆ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್‌ಗೆ ಕ್ಷಮೆಯಾಚಿಸಬೇಕು ಎಂದು ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. ಕ್ಷಮೆಯಾಚನೆಗೆ 3 ದಿನಗಳ ಕಾಲಾವಕಾಶ ನೀಡಿದೆ. ಒಂದು ವೇಳೆ ಕ್ಷಮೆ ಕೇಳದಿದ್ದರೆ ಕಂಪನಿಯು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಮಿತಿ ಎಚ್ಚರಿಸಿದೆ.

- Advertisement -

ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ, ಬಿಜೆಪಿ ಸಂಸದ ನಿಶಿಕಾಂತ್ ದುಬೆ, “ಪ್ರಧಾನಿ ಮೋದಿ ಅವರ ಜುಲೈ 23ರ ವಿಡಿಯೋವನ್ನು ತೆಗೆದುಹಾಕಿರುವುದು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’ಯಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಫೇಸ್‌ಬುಕ್ ಈ ವಿಷಯದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಅದಕ್ಕಿರುವ ‘ಸೇಫ್ ಹಾರ್ಬರ್’ ರಕ್ಷಣಾ ಹಕ್ಕನ್ನು ಹಿಂಪಡೆಯಲಾಗುವುದು. ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಲೇಬೇಕು, ಇಲ್ಲದಿದ್ದರೆ ಕಾನೂನು ವ್ಯಾಜ್ಯ ಎದುರಿಸಬೇಕಾಗುತ್ತದೆ” ಎಂದು ಸಂಸದೀಯ ಸಮಿತಿ ಹೇಳಿದೆ.

“ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 79ರ ಅಡಿಯಲ್ಲಿ ಮೆಟಾ ಹೊಂದಿರುವ ‘ಸೇಫ್ ಹಾರ್ಬರ್’ ರಕ್ಷಣೆಯನ್ನು ಹಿಂಪಡೆಯಲಾಗುವುದು. ಈ ನಿಯಮದ ಪ್ರಕಾರ, ಬಳಕೆದಾರರು ಅಪ್‌ಲೋಡ್ ಮಾಡುವ ವಿಷಯಗಳಿಗೆ ಸಾಮಾಜಿಕ ಜಾಲತಾಣಗಳು ನೇರ ಕಾನೂನು ಹೊಣೆಗಾರಿಕೆಯಿಂದ ವಿನಾಯಿತಿ ಪಡೆಯುತ್ತವೆ. ಆದರೆ, ಈ ರಕ್ಷಣೆ ರದ್ದಾದರೆ, ವೇದಿಕೆಯಲ್ಲಿ ಪ್ರಕಟವಾಗುವ ಪ್ರತಿಯೊಂದು ವಿಷಯಕ್ಕೂ ಮೆಟಾ ಸಂಸ್ಥೆಯೇ ನೇರ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಸಮಿತಿ ಎಚ್ಚರಿಸಿದೆ.

ಪ್ರಧಾನಿ ಮೋದಿ ಅವರು ಮೊದಲು ಇನ್‌ಸ್ಟಾಗ್ರಾಮ್ ಮತ್ತು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ಸೆಲ್ಫಿ ವಿಡಿಯೋ ಸುಮಾರು 5 ಗಂಟೆಗಳ ಕಾಲ ಫೇಸ್‌ಬುಕ್‌ನಿಂದ ಕಣ್ಮರೆಯಾಗಿತ್ತು. ಈ ವಿಡಿಯೋದಲ್ಲಿ, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದರು. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಬಗ್ಗೆ ಸರ್ಕಾರ ಕೈಗೊಳ್ಳಲಿರುವ ಕ್ರಮಗಳ ಕುರಿತು ವಿವರಿಸಿದ್ದರು.

ನಂತರ ವಿಡಿಯೋವನ್ನು ಮರುಸ್ಥಾಪಿಸಿದ ಮೆಟಾ, ‘ಇದು ತಾಂತ್ರಿಕ ಅಥವಾ ಆಲ್ಗರಿದಮ್ ದೋಷದಿಂದ ಆಗಿರುವ ತಪ್ಪು’ ಎಂದು ಹೇಳಿತ್ತು. ಲೋಪಕ್ಕಾಗಿ ಕ್ಷಮೆಯಾಚಿಸಿತ್ತು. ಆದರೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಸ್ಪಷ್ಟನೆಯನ್ನು ತಿರಸ್ಕರಿಸಿದ್ದು, ತಾಂತ್ರಿಕ ದೋಷವೇ ಆಗಿದ್ದರೂ ಮೆಟಾ ತನ್ನ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳಬೇಕು ಎಂದು ಹೇಳಿದೆ.

“ಪ್ರಧಾನಿಯವರ ಪೋಸ್ಟ್ ಅನ್ನೇ ಮೆಟಾ ಡಿಲೀಟ್ ಮಾಡಿದೆ. ಮೆಟಾ ಹೀಗೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ತೆಗೆದುಹಾಕಿದ್ದಕ್ಕಾಗಿ ಮಾರ್ಕ್ ಜುಕರ್‌ಬರ್ಗ್ ವೈಯಕ್ತಿಕವಾಗಿ ಕ್ಷಮೆಯಾಚಿಸಬೇಕು” ಎಂದು ನಿಶಿಕಾಂತ್ ದುಬೆ ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಇಲ್ಲಿ ಹೆಣ್ಣು ಮಕ್ಕಳನ್ನ ದಷ್ಟಪುಷ್ಟವಾಗಿ ಬೆಳೆಸುವುದು ಭದ್ರ ಭವಿಷ್ಯಕ್ಕಾಗಿ ಅಲ್ಲ, ʼಸಂಪಾದನೆʼಗಾಗಿ!

ಅಂದಹಾಗೆ, ತಮ್ಮಿಷ್ಟದಂತೆ ಪ್ರತಿಪಕ್ಷಗಳ ಧ್ವನಿ ಅಡಗಿಸಲು ಇದೇ ಮೆಟಾ ಸಂಸ್ಥೆಯನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂಬುದು ಗೊತ್ತಿಲ್ಲದ ವಿಚಾರವೇನೂ ಅಲ್ಲ. ತಮ್ಮ ವಿರೋಧಿಗಳ ಪೋಸ್ಟ್‌ಗಳನ್ನು ಬ್ಯಾನ್ ಮಾಡುವ, ಡಿಲೀಟ್ ಮಾಡುವ ಅಥವಾ ನಿರ್ಬಂಧಿಸುವ ಕೃತ್ಯವನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮಾಡಿದೆ. ಇದೀಗ, ತಾಂತ್ರಿಕ ದೋಷದ ಕಾರಣವೂ ಅಥವಾ ಮತ್ತಾವುದೋ ಕಾರಣಕ್ಕಾಗಿ ಮೋದಿ ಅವರ ಪೋಸ್ಟ್‌ ಡಿಲೀಟ್‌ ಆಗಿದ್ದಕ್ಕೆ ಇದೇ ಬಿಜೆಪಿ ಮತ್ತು ಕೇಂದ್ರ ಸರ್ಕಾರಗಳು ಮೆಟಾ ವಿರುದ್ಧ ಸೆಟೆದು ನಿಂತಿವೆ. ಜುಕರ್‌ಬರ್ಗ್‌ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತಿವೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ.

ಸ್ವಂತ ಹಿತಾಸಕ್ತಿಗೆ ಧಕ್ಕೆಯಾದಾಗ ಮಾತ್ರ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಕಾನೂನಿನ ಚಾವಟಿ ನೆನಪಾಗುತ್ತದೆ. ಆದರೆ, ವಿರೋಧಿ ದನಿಗಳ ಉಸಿರುಕಟ್ಟಿಸುವಾಗ ಕಾಣದ ‘ಸೇಫ್ ಹಾರ್ಬರ್’ ಕಳಕಳಿ, ತಮ್ಮದೇ ವಿಡಿಯೋ ಮಾಯವಾದಾಗ ಮಾತ್ರವೇ ನೆನಪಿಗೆ ಬರುತ್ತದೆ. ಇದು ಈ ದೇಶದ ರಾಜಕೀಯ ವ್ಯವಸ್ಥೆಯ ವಿಪರ್ಯಾಸ! ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...