ತೀವ್ರ ವಿರೋಧದ ಬಳಿಕ ಜ್ಯೋತಿಷಿ ನೇಮಕಾತಿ ರದ್ದುಗೊಳಿಸಿದ ಸಿಎಂ ಜೋಸೆಫ್ ವಿಜಯ್

Date:

ತಮಿಳುನಾಡು ಮುಖ್ಯಮಂತ್ರಿ ಕಚೇರಿಯಲ್ಲಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ಆಪ್ತ ಜ್ಯೋತಿಷಿಯನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್‌ಡಿ- ರಾಜಕೀಯ) ನೇಮಕ ಮಾಡಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ತೀವ್ರ ವಿರೋಧದ ಬೆನ್ನಲ್ಲೇ ಆ ನೇಮಕಾತಿ ಆದೇಶವನ್ನು ರದ್ದುಗೊಳಿಸಿದ್ದಾರೆ.

- Advertisement -

ಇತ್ತೀಚೆಗೆ ನಡೆದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ನಾಯಕ ವಿಜಯ್, ಮೇ 10ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ, ತಮ್ಮ ರಾಜಕೀಯ ಏಳಿಗೆಯ ಬಗ್ಗೆ ಮುಂಚಿತವಾಗಿಯೇ ನಿಖರ ಭವಿಷ್ಯ ನುಡಿದಿದ್ದ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮೇ 12ರಂದು ಸಿಎಂ ಕಚೇರಿಯ ‘ರಾಜಕೀಯ ವಿಶೇಷ ಕರ್ತವ್ಯಾಧಿಕಾರಿ’ಯಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದರು. ಆದರೆ, ಈ ನಿರ್ಧಾರವು ಮಿತ್ರಪಕ್ಷಗಳು ಹಾಗೂ ಪ್ರಗತಿಪರ ವಲಯದಿಂದ ತೀವ್ರ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಸರ್ಕಾರ ಈಗ ಈ ಕ್ರಮದಿಂದ ಹಿಂದೆ ಸರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಸರ್ಕಾರದ ಅಧಿಕೃತ ವ್ಯವಸ್ಥೆಯೊಳಗೆ ಜ್ಯೋತಿಷಿಯೊಬ್ಬರಿಗೆ ಸ್ಥಾನ ನೀಡಿದ್ದು ಭಾರೀ ವಿವಾದ ಸೃಷ್ಟಿಸಿತ್ತು. “ಸರ್ಕಾರವು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕು. ಅದನ್ನು ಬಿಟ್ಟು, ಸಾರ್ವಜನಿಕರ ತೆರಿಗೆ ಹಣದಲ್ಲಿ ಜ್ಯೋತಿಷಿಯೊಬ್ಬರಿಗೆ ಉನ್ನತ ಹುದ್ದೆ ನೀಡುವುದು ಒಪ್ಪತಕ್ಕದ್ದಲ್ಲ. ಇದು ಆಡಳಿತ ವ್ಯವಸ್ಥೆಗೆ ಸ್ವೀಕಾರಾರ್ಹವಲ್ಲ,” ಎಂದು ಸರ್ಕಾರದ ಮಿತ್ರಪಕ್ಷಗಳಾದ ಕಾಂಗ್ರೆಸ್, ಸಿಪಿಎಂ ಮತ್ತು ವಿಸಿಕೆ ನಾಯಕರು ಕಟುವಾಗಿ ಟೀಕಿಸಿದ್ದರು.

ಆಡಳಿತದಲ್ಲಿ ಮೂಢನಂಬಿಕೆಗಳಿಗೆ ಮಣೆಹಾಕಲಾಗುತ್ತಿದೆ ಎಂಬ ಅಸಮಾಧಾನ ಸ್ಫೋಟಗೊಂಡಿತ್ತು. ಮಿತ್ರಪಕ್ಷಗಳ ಈ ರಾಜಕೀಯ ಒತ್ತಡ ಹಾಗೂ ಸಾರ್ವಜನಿಕ ವಲಯದ ಆಕ್ರೋಶಕ್ಕೆ ಮಣಿದಿರುವ ಸಿಎಂ ವಿಜಯ್, ವಿವಾದವನ್ನು ಶಮನಗೊಳಿಸುವ ಉದ್ದೇಶದಿಂದ ನೇಮಕಾತಿಯನ್ನು ರದ್ದುಪಡಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಬೆಳ್ಳಿತೆರೆಯಿಂದ ವಿಧಾನಸಭೆಗೆ ಆಪ್ತ ಗೆಳೆಯರು: ಸಿಎಂ ವಿಜಯ್‌ಗೆ ವಿಪಕ್ಷ ನಾಯಕ ಉದಯನಿಧಿ ಮುಖಾಮುಖಿ

ಮೂಲತಃ ಈರೋಡಿನವರಾದ ಹಾಗೂ ‘ಪಂಡಿತ್ ವೆಟ್ರಿವೇಲ್’ ಎಂದು ಕರೆಯಲ್ಪಡುತ್ತಿದ್ದ ರಿಕಿ ರಾಧನ್, ಕಳೆದ 4 ದಶಕಗಳಿಂದ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಚುನಾವಣೆಗೂ ಮುನ್ನ, ವಿಜಯ್ ಅವರ ಜಾತಕದಲ್ಲಿ ‘ಸುನಾಮಿ ಯೋಗ’ವಿದ್ದು, ಟಿವಿಕೆ ಪಕ್ಷವು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಅವರು ಸಾರ್ವಜನಿಕವಾಗಿ ಭವಿಷ್ಯ ನುಡಿದಿದ್ದರು.

ಚುನಾವಣೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದಾಗ, ರಿಕಿ ರಾಧನ್ ಅವರ ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದವು. ಇದೇ ಕಾರಣಕ್ಕಾಗಿ ಅವರಿಗೆ ಸಿಎಂ ಕಚೇರಿಯಲ್ಲಿ ಉನ್ನತ ಹುದ್ದೆ ಒಲಿದುಬಂದಿತ್ತು.

ಈ ಹಿಂದೆ ಮಾಜಿ ಸಿಎಂ ಜೆ. ಜಯಲಲಿತಾ ಅವರಿಗೂ ಆಪ್ತ ಜ್ಯೋತಿಷಿಯಾಗಿದ್ದ ರಿಕಿ ರಾಧನ್, ಹಲವು ಎಲ್‌ ಕೆ ಅಡ್ವಾಣಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರಿಗೆ ಮಾರ್ಗದರ್ಶನ ನೀಡಿದ ಹಿನ್ನೆಲೆ ಹೊಂದಿದ್ದಾರೆ. ಆದರೆ, ಆಧುನಿಕ ಆಡಳಿತ ಯಂತ್ರದಲ್ಲಿ ಜ್ಯೋತಿಷಿಯೊಬ್ಬರ ಅಧಿಕೃತ ಹಸ್ತಕ್ಷೇಪವನ್ನು ವಿರೋಧ ಪಕ್ಷಗಳು ಹಾಗೂ ಮಿತ್ರಪಕ್ಷಗಳು ತೀವ್ರವಾಗಿ ಖಂಡಿಸಿದ್ದರಿಂದ, ಆರಂಭದಲ್ಲೇ ಎದುರಾದ ಈ ಭಿನ್ನಮತವನ್ನು ತಡೆಯುವ ನಿಟ್ಟಿನಲ್ಲಿ ವಿಜಯ್ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...