ಮಧ್ಯಪ್ರದೇಶದ ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ‘ಬ್ರಿಟಿಷ್’ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು, ಈವರೆಗೆ ಏಳು ಮಂದಿ ಈ ನಕಲಿ ವೈದ್ಯನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಆಸ್ಪತ್ರೆಯಲ್ಲಿ ಒಂದೇ ತಿಂಗಳಲ್ಲಿ ಏಳು ಮಂದಿ ಸಾವಪ್ಪುತ್ತಿದ್ದಂತೆ ಸ್ಥಳೀಯವಾಗಿ ಆತಂಕ ಸೃಷ್ಟಿಯಾಗಿತ್ತು. ಅದಾದ ಬಳಿಕ ಎನ್ ಜಾನ್ ಕೆಮ್ ಎಂಬ ವ್ಯಕ್ತಿ ಕ್ರಿಶ್ಚಿಯನ್ ಮಿಷನರಿ ಆಸ್ಪತ್ರೆಯಲ್ಲಿ ಅದೇ ಹೆಸರಿನ ಪ್ರಸಿದ್ಧ ಬ್ರಿಟಿಷ್ ವೈದ್ಯರಂತೆ ನಟಿಸಿ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ಆರೋಪಿಸಲಾಗಿತ್ತು.
ಇದನ್ನು ಓದಿದ್ದೀರಾ? ಬೀದರ್ | ನಕಲಿ ವೈದ್ಯರ ಕ್ಲಿನಿಕ್, ಲ್ಯಾಬ್ ಮೇಲೆ ದಾಳಿ
ತಾನು ಹೃದ್ರೋಗ ತಜ್ಞ ಎಂದು ಹೇಳಿಕೊಂಡಿದ್ದ ನಕಲಿ ವೈದ್ಯ ರೋಗಿಗಳಿಗೆ ಹೃದಯ ಶಸ್ತ್ರಚಿಕಿತ್ಸೆಗಳನ್ನೂ ಮಾಡಿದ್ದನು. ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ತನಿಖೆಯ ನಂತರ ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂದು ತಿಳಿದುಬಂದಿದೆ.
ಇನ್ನು ಮಕ್ಕಳ ಕಲ್ಯಾಣ ಸಮಿತಿಯ ವಕೀಲ ಮತ್ತು ಜಿಲ್ಲಾ ಅಧ್ಯಕ್ಷ ದೀಪಕ್ ತಿವಾರಿ, ಈವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅಧಿಕೃತ ಸಾವಿನ ಸಂಖ್ಯೆ 7 ಆಗಿದೆ. ಆದರೂ ನೈಜ ಸಾವಿನ ಸಂಖ್ಯೆ ಇನ್ನೂ ಅಧಿಕವಾಗಿದೆ ಎಂದಿದ್ದಾರೆ. ದೀಪಕ್ ತಿವಾರಿ ಅವರು ಈ ಹಿಂದೆ ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ದೂರು ನೀಡಿದ್ದರು.
ಇದನ್ನು ಓದಿದ್ದೀರಾ? ಬಿಹಾರ | ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ: ಬಾಲಕ ಸಾವು
“ನಾವು ಈ ಹೆಸರಿನ ನಿಜವಾದ ಬ್ರಿಟಿಷ್ ವೈದ್ಯರ ಬಗ್ಗೆ ಪರಶೀಲನೆ ನಡೆಸಿದಾಗ ಅವರು ಈಗಲೂ ಬ್ರಿಟನ್‌ನಲ್ಲಿಯೇ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ಈ ವ್ಯಕ್ತಿಯ ಹೆಸರು ನರೇಂದ್ರ ಯಾದವ್. ಈ ಹಿಂದೆ ಹೈದರಾಬಾದ್‌ನಲ್ಲಿದ್ದ ಈತನ ಮೇಲೆ ಅಲ್ಲಿ ಪ್ರಕರಣಗಳು ದಾಖಲಾಗಿವೆ. ಎಲ್ಲಿಯೂ ಆತ ತನ್ನ ನಿಜವಾದ ಹೆಸರು, ದಾಖಲೆಗಳನ್ನು ತೋರಿಸಿಲ್ಲ” ಎಂದು ಮಾಧ್ಯಮಕ್ಕೆ ತಿವಾರಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಪ್ರಿಯಾಂಕ್ ಕನೂಂಗೊ, ಮಿಷನರಿ ಆಸ್ಪತ್ರೆಯು ಆಯುಷ್ಮಾನ್ ಭಾರತ್ ಯೋಜನೆಯಡಿ ಸರ್ಕಾರದಿಂದ ಹಣವನ್ನು ಪಡೆಯುತ್ತಿದೆ. ಈ ಮಿಷನರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ನಕಲಿ ವೈದ್ಯ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ದೂರು ನಮಗೆ ಬಂದಿದೆ. ಇದು ಗಂಭೀರ ಆರೋಪ. ಪ್ರಸ್ತುತ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.
