ಕೊಲೆ ಆರೋಪಿ ಬಿಡುಗಡೆ ಮಾಡುವಂತೆ ರಾಷ್ಟ್ರಪತಿ ಹೆಸರಿನಲ್ಲೇ ಜೈಲಿಗೆ ನಕಲಿ ಪತ್ರ

Date:

ಕೊಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿ ಭಾರತದ ರಾಷ್ಟ್ರಪತಿ ಹೆಸರಿನಲ್ಲಿಯೇ ಜೈಲಿಗೆ ನಕಲಿ ಪತ್ರ ಬರೆದಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

- Advertisement -

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾ ಕಾರಾಗೃಹಕ್ಕೆ ರಾಷ್ಟ್ರಪತಿ ಹೆಸರಿನಲ್ಲಿ ಆದೇಶ ಪತ್ರ ಬಂದಿದೆ. ಆದರೆ, ಜೈಲು ಅಧಿಕಾರಿಗಳು ಪತ್ರದ ಬಗ್ಗೆ ಅನುಮಾನಗೊಂಡು ತನಿಖೆ ನಡೆಸಿದ್ದು, ಅದು ನಕಲಿ ಆದೇಶವೆಂದು ಕಂಡುಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೊಲೆ ಆರೋಪಿ ಅಜಯ್ ಎಂಬಾತನ ವಿರುದ್ಧ ಜನಕಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತನನ್ನು ಸಹಾರನ್‌ಪುರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿತ್ತು. ಇತ್ತೀಚೆಗೆ, ಆತನನ್ನು ಬಿಡುಗಡೆ ಮಾಡುವಂತೆ ರಾಷ್ಟ್ರಪತಿ ಹೆಸರಿನಲ್ಲಿ ಜೈಲಿಗೆ ನಕಲಿ ಪತ್ರ ಬಂದಿದೆ.

“ಜೈಲು ಆಡಳಿತವು ‘ರಾಷ್ಟ್ರಪತಿ ನ್ಯಾಯಾಲಯ’ದ ಹೆಸರಿನಲ್ಲಿ ಬಂದ ಆದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು. ಪತ್ರವೂ ಅನುಮಾನಾಸ್ಪದವಾಗಿತ್ತು. ಪತ್ರದ ಬಗ್ಗೆ ಪರಿಶೀಲನೆ ನಡೆಸಿದಾಗ, ‘ರಾಷ್ಟ್ರಪತಿ ನ್ಯಾಯಾಲಯ’ ಎಂಬುದೇ ಅಸ್ವಿತ್ವದಲ್ಲಿಲ್ಲ ಎಂಬುದು ಗೊತ್ತಾಯಿತು. ಯಾರೋ ನಕಲಿ ಪತ್ರ ಬರೆದು, ಜೈಲು ಅಧಿಕಾರಿಗಳು ಯಾಮಾರಿಸಲು ಪ್ರಯತ್ನಿಸಿದ್ದಾರೆ” ಎಂದು ಜೈಲು ಅಧಿಕಾರಿ ಸತ್ಯಪ್ರಕಾಶ್ ಹೇಳಿದ್ದಾರೆ.

ರಾಷ್ಟ್ರಪತಿ ಹೆಸರಿನಲ್ಲಿ ನಕಲಿ ಪತ್ರ ಬಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜೈಲು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಜನಕಪುರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...