ನಕಲಿ NCERT ಪಠ್ಯಪುಸ್ತಕಗಳ ಹಾವಳಿ; ಅಧಿಕೃತ ಮೂಲಗಳಿಂದ ಮಾತ್ರ ಪುಸ್ತಕ ಪಡೆಯಲು ಸೂಚನೆ

Date:

NCERT (ಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಪಠ್ಯಪುಸ್ತಕಗಳ ನಕಲಿ ಮತ್ತು ಪೈರೇಟೆಡ್ ಪ್ರತಿಗಳು ದೇಶಾದ್ಯಂತ ಮುದ್ರಿತ ಹಾಗೂ ಡಿಜಿಟಲ್ ರೂಪದಲ್ಲಿ ಹರಿದಾಡುತ್ತಿರುವುದನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಗಂಭೀರವಾಗಿ ಪರಿಗಣಿಸಿದೆ. ನಿರ್ದಿಷ್ಟವಾಗಿ, 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ‘Understanding Society India & Beyond’ (ಭಾಗ-1) ನಕಲಿ ಆವೃತ್ತಿಯು ಸಾಮಾಜಿಕ ಜಾಲತಾಣಗಳು, ವೆಬ್‌ಸೈಟ್‌ಗಳು ಮತ್ತು ಸಂದೇಶ ಕಳುಹಿಸುವ ಗುಂಪುಗಳಲ್ಲಿ ಯಾವುದೇ ಅನುಮೋದನೆಯಿಲ್ಲದೆ ಹರಿದಾಡುತ್ತಿದೆ ಎಂದು ಮಂಡಳಿ ಎಚ್ಚರಿಸಿದೆ.

- Advertisement -

ಈ ನಕಲಿ ವಿಷಯಗಳು ತಪ್ಪಾಗಿರಬಹುದು, ಅಪೂರ್ಣವಾಗಿರಬಹುದು ಅಥವಾ ತಿರುಚಲ್ಪಟ್ಟಿರಬಹುದು ಎಂದು ಎನ್‌ಸಿಇಆರ್‌ಟಿ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಸಾರ್ವಜನಿಕರು ಇಂತಹ ಅಪ್ರಮಾಣಿತ ಆಕರಗಳನ್ನು ನಂಬದಂತೆ ಸೂಚಿಸಲಾಗಿದೆ. ಪುಸ್ತಕಗಳನ್ನು ಅಧಿಕೃತ ಚಾನೆಲ್‌ಗಳ ಮೂಲಕ ಮಾತ್ರ ಪ್ರಕಟಿಸಲಾಗುತ್ತದೆ ಮತ್ತು ಅಧಿಕೃತ ಬಿಡುಗಡೆಗೂ ಮುನ್ನ ಯಾವುದೇ ಪುಸ್ತಕವು ಚಲಾವಣೆಗೆ ಅಧಿಕೃತವಲ್ಲ ಎಂದು ಮಂಡಳಿ ಪುನರುಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪಠ್ಯಪುಸ್ತಕಗಳನ್ನು ಪಡೆಯಲು ಎನ್‌ಸಿಇಆರ್‌ಟಿ ಅಧಿಕೃತ ವೆಬ್‌ಸೈಟ್, ಇ-ಪಾಠಶಾಲೆ (ePathshala), ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪೋರ್ಟಲ್ ಅಥವಾ ಅಧಿಕೃತ ಮಾರಾಟಗಾರರ ಪಟ್ಟಿ ಮತ್ತು ಸಾಫ್ಟ್ ಪ್ರತಿಗಳ ಅಧಿಕೃತ ಮೂಲಗಳಿಗೆ ಮಾತ್ರ ಭೇಟಿ ನೀಡಬೇಕೆಂದು ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಭೂ ಹಗರಣಗಳ ಸಮರ: ಎಂಪಿ ಸಿಎಂ ವಿರುದ್ಧ ಕಾಂಗ್ರೆಸ್, ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ದಾಳಿ-ಪ್ರತಿದಾಳಿ

NCERT ಹಕ್ಕುಸ್ವಾಮ್ಯ ಕಾಯ್ದೆ 1957ರ ಅಡಿಯಲ್ಲಿ ನಕಲಿ ವಿಷಯವನ್ನು ಪ್ರಸಾರ ಮಾಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದೆ. ಅಂತಹ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣವೇ [email protected] ಇಮೇಲ್ ಮೂಲಕ ವರದಿ ಮಾಡಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. NCERT ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಕಲಿ ವಿಷಯಗಳ ಮೂಲವನ್ನು ಪತ್ತೆಹಚ್ಚುವ ಮತ್ತು ಹಂಚಿಕೆಯನ್ನು ತಡೆಗಟ್ಟುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...